ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಿಗ್ ಅಪ್ಡೇಟ್ ರಿವೀಲ್ ಆಗಿದ್ದು, ಆರೋಪಿ ದರ್ಶನ್ ಗೆ ಮತ್ತಷ್ಟು ಸಂಕಷ್ಟ ಎದುರಾಗಿದೆ.
ರೇಣುಕಾಸ್ವಾಮಿ ಕೊಲೆ ಪ್ರಕರಣ ಬೆಳಕಿಗೆ ಬಂದ ಬಳಿಕ ಪೊಲೀಸರು ದರ್ಶನ್ ಮನೆಯಲ್ಲಿ ವಶಪಡಿಸಿಕೊಂಡಿದ್ದ ನೀಲಿ ಬಣ್ಣದ ಜೀನ್ಸ್ ಪ್ಯಾಂಟ್ ಹಾಗೂ ಕಪ್ಪು ರೌಂಡ್ ನೆಕ್ ಶರ್ಟ್ ನಲ್ಲಿ ರಕ್ತದ ಕಲೆ ಪತ್ತೆಯಾಗಿತ್ತು.
ಈ ರಕ್ತದ ಕಲೆಗಳು ರೇಣುಕಾಸ್ವಾಮಿ ದೇಹದ ರಕ್ತದ ಕಲೆಯೇ ಎನ್ನುವುದನ್ನು ಪರಿಶೀಲಿಸಲು ಆ ಬಟ್ಟೆಗಳನ್ನು ಎಫ್‌ಎಸ್‌ಎಲ್‌ಗೆ ಕಳುಹಿಸಿದ್ದರು. ಇದೀಗ ಪೊಲೀಸರ ಕೈಗೆ ಎಫ್‌ಎಸ್‌ಎಲ್ ವರದಿ ಸೇರಿದ್ದು, ಕೊಲೆ ಪ್ರಕರಣದಲ್ಲಿ ದರ್ಶನ್ ವಿರುದ್ಧ ಮಹತ್ವದ ಸಾಕ್ಷಿ ಲಭಿಸಿದೆ.
ದರ್ಶನ್ ಅವರ ಬಟ್ಟೆ ಮೇಲಿದ್ದ ರಕ್ತದ ಕಲೆಗಳು ರೇಣುಕಾಸ್ವಾಮಿಯ ದೇಹದ ರಕ್ತ ಎಂಬುದು ಎಫ್ ಎಸ್ ಎಲ್ ವರದಿಯಲ್ಲಿ ದೃಢಪಟ್ಟಿದೆ. ಆ ಮೂಲಕ ಈ ಪ್ರಕರಣದಲ್ಲಿ ದರ್ಶನ್ ಅವರು ಭಾಗಿಯಾಗಿದ್ದಾರೆ ಎನ್ನುವುದಕ್ಕೆ ಪೊಲೀಸರಿಗೆ ಮಹತ್ವದ ಸಾಕ್ಷಿ ಸಿಕ್ಕಂತಾಗಿದೆ ಎನ್ನಲಾಗಿದೆ.
ಈ ಪ್ರಕರಣದಲ್ಲಿ ಆರೋಪಿಗಳ ಡಿಎನ್ಎ ಟೆಸ್ಟ್ ಸ್ಯಾಂಪಲ್ ರಿಪೋರ್ಟ್ಸ್, ಕೃತ್ಯಕ್ಕೆ ಬಳಸಿದ್ದ ವಸ್ತುಗಳ ರಿಪೋರ್ಟ್ಸ್, ಸಿಸಿಟಿವಿ ರಿಪೋರ್ಟ್ಸ್ ಸೇರಿದಂತೆ ಇನ್ನು ಹಲವು ವರದಿಗಳು ಇನ್ನಷ್ಟೇ ಪೊಲೀಸರ ಕೈಗೆ ಸೇರಬೇಕಿದೆ.