ಶಿವಮೊಗ್ಗ: ಇಬ್ಬರು ಮಕ್ಕಳೊಂದಿಗೆ ಮಹಿಳೆಯೊಬ್ಬರು ಬಾವಿಗೆ ಹಾರಿ ಆತ್ಮಹತ್ಯೆಗೆ ಶರಣಾಗಿರುವಂತ ಘಟನೆ ಹೊಸನಗರದಲ್ಲಿ ನಡೆದಿದೆ.
ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಚಂಪಕಾಪುರ ಗ್ರಾಮದಲ್ಲಿ ಈ ಹೃದಯ ವಿದ್ರಾವಕ ಘಟನೆ ನಡೆದಿದೆ. ಚಂಪಕಾಪುರದ ನಿವಾಸಿಯಾಗಿದ್ದಂತ ರಾಜೇಶ್ ಎಂಬುವರ ಪತ್ನಿ ವಾಣಿ(32) ಎಂಬುವರು ತನ್ನ ಇಬ್ಬರು ಮಕ್ಕಳಾದಂತ ಸಮರ್ಥ(12) ಹಾಗೂ ಸಂಪದ(6) ಎಂಬುವರೊಂದಿಗೆ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಗುರುವಾರ ರಾತ್ರಿಯಂದು ಈ ಘಟನೆ ನಡೆದಿದೆ. ಆತ್ಮಹತ್ಯೆಗೆ ಕಾರಣ ಏನೆಂದು ತಿಳಿದು ಬಂದಿಲ್ಲ. ಸ್ಥಳಕ್ಕೆ ನಗರ ಠಾಣೆಯ ಪಿಎಸ್ಐ ರಮೇಶ್ ಭೇಟಿ ನೀಡಿ, ಪರಿಶೀಲನೆ ನಡೆಸಿದರು.
ಬಾವಿಯಲ್ಲಿದ್ದಂತ ವಾಣಿ, ಸಮರ್ಥ ಹಾಗೂ ಸಂಪದ ಮೃತದೇಹವನ್ನು ಹೊರತೆಗೆಯಲಾಗಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಪೊಲೀಸರ ತನಿಖೆಯ ಬಳಿಕ ಇಬ್ಬರು ಮಕ್ಕಳೊಂದಿಗೆ ಮಹಿಳೆಯು ಆತ್ಮಹತ್ಯೆ ಹಿಂದಿನ ಕಾರಣ ತಿಳಿದು ಬರಬೇಕಿದೆ.