ಮೈಸೂರು : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಜೆಡಿಎಸ್ ಮೈಸೂರು ಚಲೋ ಪಾದಯಾತ್ರೆ ಮಾಡುತ್ತಿದ್ದರೆ, ಇನ್ನೊಂದು ಕಡೆ ಇದಕ್ಕೆ ಕೌಂಟರ್ ನೀಡಲು ಕಾಂಗ್ರೆಸ್ ಪಕ್ಷ ಜನಾಲೋಂದನ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಇಂದು ಮೈಸೂರಿನಲ್ಲಿ ಮಹಾರಾಜ ಕಾಲೇಜಿನ ಮೈದಾನದಲ್ಲಿ ನಡೆದ ಸಮಾವೇಶದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ವಿಪಕ್ಷಗಳ ವಿರುದ್ಧ ಗುಡುಗಿದರು.
ಈ ಒಂದು ಸಮಾವೇಶದಲ್ಲಿ ಬಿಜೆಪಿ ಹಾಗೂ ಜೆಡಿಎಸ್ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದ ಡಿಸಿಎಂ ಡಿಕೆ ಶಿವಕುಮಾರ್ ಅವರು,ಈ ಬಂಡೆ ಮುಖ್ಯಮಂತ್ರಿ ಸಿದ್ದರಾಮಯ್ಯ ಜೊತೆ ಇದೆ. ರಾಜ್ಯದ ಮತದಾರರು ಸಿದ್ದರಾಮಯ್ಯ ಜೊತೆ ಇದ್ದಾರೆ. ಈ ಬಂಡೆಯ ಹಿಂದೆ ರಾಜ್ಯದ 136 ಶಾಸಕರು ಇದ್ದಾರೆ. ನಾವೆಲ್ಲರೂ ಸಿಎಂ ಸಿದ್ದರಾಮಯ್ಯ ಜೊತೆಗೆ ಇರುವುದಾಗಿ ಎಂದು ಮೈಸೂರಿನ ಜನಂದೋಲನ ಸಮಾವೇಶದಲ್ಲಿ ಡಿಕೆ ಶಿವಕುಮಾರ್ ಹೇಳಿಕೆ ನೀಡಿದರು.
ಯಾವುದೇ ಕಾರಣಕ್ಕೂ ಗ್ಯಾರಂಟಿಗಳನ್ನು ತೆಗೆದುಹಾಕಲು ಆಗಲ್ಲ. ಕುಮಾರಸ್ವಾಮಿ ತಮ್ಮ ಕುಟುಂಬಕ್ಕೆ ಏನು ಬೇಕು ಅದನ್ನು ಮಾಡಿಕೊಂಡಿದ್ದಾರೆ. ಸಿಎಂ ಸಿದ್ದರಾಮಯ್ಯ ಎರಡನೇ ಹಿಂದುಳಿದ ನಾಯಕರು. ಸಂಚಿನಿಂದ ಅಧಿಕಾರಿಂದ ಅವರನ್ನು ಕೆಳಗಿಳಿಸಲು ಪ್ರಯತ್ನ ಮಾಡುತ್ತಿದ್ದಾರೆ. ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಕೆಳಗಿಳಿಸುವುದಕ್ಕೆ ಸಾಧ್ಯವಿಲ್ಲ ಎಂದು ಹೇಳಿದರು.