ಬೆಂಗಳೂರು: ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ಮೂಲದ ಯುವಕನೊಬ್ಬ ಪೊಲೀಸರ ಮೇಲಿನ ಕೋಪಕ್ಕೆ ವಿಧಾನಸೌಧದ ಮುಂದೆಯೇ ತನ್ನ ಎಲೆಕ್ಟ್ರಿಕ್ ಬೈಕ್ ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿರುವ ಘಟನೆ ಬುಧವಾರ ನಡೆದಿದೆ.
ಚಳ್ಳಕೆರೆ ಮೂಲದ ಪೃಥ್ವಿರಾಜ್ ಎಂಬ ಯುವಕ ಇಂದು ಮಧ್ಯಾಹ್ನ ವಿಧಾನಸೌಧದ ಮುಂಭಾಗದಲ್ಲಿ ಎಲೆಕ್ಟ್ರಿಕ್ ಬೈಕ್ ನಿಲ್ಲಿಸಿ ಬೆಂಕಿ ಹಚ್ಚಿದ್ದಾರೆ. ಬೈಕ್ ಸಂಪೂರ್ಣ ಹೊತ್ತಿ ಉರಿದಿದೆ.
ಸದ್ಯ ಯುವಕನನ್ನು ವಿಧಾನಸೌಧ ಪೊಲೀಸರು ವಶಕ್ಕೆ ಪಡೆದಿದ್ದು, ವಿಚಾರಣೆ ನಡೆಸುತ್ತಿದ್ದಾರೆ.
ಇತ್ತೀಚಿಗೆ ಪೃಥ್ವಿರಾಜ್ ಟ್ರಕ್ಕಿಂಗ್ ಹೋಗಿ ಮಿಸ್ಸಾಗಿದ್ದರು. ಈ ಹಿನ್ನಲೆಯಲ್ಲಿ ಗಾಬರಿಗೊಂಡ ಆತನ ತಾಯಿ ಚಳ್ಳಕೆರೆ ಪೊಲೀಸ್ ಠಾಣೆಗೆ ದೂರು ನೀಡಲು ಹೋದಾಗ ಪೊಲೀಸರು ಪೃಥ್ವಿ ತಾಯಿಯನ್ನ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.
ತನ್ನ ತಾಯಿಯನ್ನು ಬೈದಿದ್ದಕ್ಕೆ ಬೇಸರಗೊಂಡ ಪೃಥ್ವಿರಾಜ್, ಇಂದು ವಿಧಾನಸೌಧದ ಮುಂದೆಯೇ ಬೈಕ್ಗೆ ಬೆಂಕಿ ಹಚ್ಚಿ ಪೊಲೀಸರ ವಿರುದ್ಧ ಆಕ್ರೋಶ ಹೊರಹಾಕಿದ್ದಾನೆ.