Breaking
Sun. Sep 8th, 2024

ಸಿಎಂ ಸಿದ್ದರಾಮಯ್ಯ ಪತ್ನಿ ಗೌರಮ್ಮ ರೀತಿ ಇದ್ದವರು, ಅವರ ಮೇಲೆ ಆಪಾದನೆ ಬಾರದಿರಲಿ : ಈಶ್ವರಪ್ಪ

By Mooka Nayaka News Aug 17, 2024
Spread the love

ಶಿವಮೊಗ್ಗ : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ ವಿಚಾರವಾಗಿ ಮಾಜಿ ಸಚಿವ ಕೆಎಸ್ ಈಶ್ವರಪ್ಪ ಪ್ರತಿಕ್ರಿಯೆ ನೀಡಿದ್ದು, ಸಿಎಂ ಸಿದ್ದರಾಮಯ್ಯ ಪತ್ನಿ ಗೌರಮ್ಮ ರೀತಿ ಇದ್ದವರು,ಅವರ ಮೇಲೆ ಆಪಾದನೆ ಬಾರದಿರಲಿ ಎಂದು ತಿಳಿಸಿದರು.

ಶಿವಮೊಗ್ಗದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನನ್ನ ಮೇಲೆ ಆಪಾದನೆ ಬಂದಾಗ ನಾನು ರಾಜೀನಾಮೆ ಕೊಟ್ಟು ತನಿಖೆಗೆ ಸಹಕಾರ ಕೊಟ್ಟಿದ್ದೇನೆ. ಅವರು ಕೂಡ ರಾಜೀನಾಮೆ ಕೊಟ್ಟು ತನಿಖೆಗೆ ಸಹಕಾರ ಕೊಡುತ್ತಾರೆ ಎಂಬ ವಿಶ್ವಾಸ ನನಗಿದೆ. ಆದರೆ ಅವರ ಶ್ರೀಮತಿಯವರನ್ನು ಎಲ್ಲಿ ಇದರಲ್ಲಿ ಸೇರಿಸಿಬಿಡುತ್ತಾರೋ ಎಂಬ ಅನುಮಾನವಿದೆ. ಪಾಪ ಅವರು ಗೌರಮ್ಮ ರೀತಿ ಇದ್ದವರು. ಅವರ ಮೇಲೆ ಅಂತಹ ಆಪಾದನೆ ಬಾರದೇ ಇರಲಿ ಎಂದು ಬೇಡಿಕೊಳ್ಳುತ್ತೇನೆ ಎಂದರು.

ಹಾಗಾಗಿ ಈ ಒಂದು ಹಗರಣದಿಂದ ಸಿಎಂ ಸಿದ್ದರಾಮಯ್ಯ ಕಾನೂನುಬದ್ಧವಾಗಿ ಹೋರಾಟ ಮಾಡಿ ಕ್ಲೀನ್‌ಚಿಟ್ ಸಿಕ್ಕಿ ಯಶಸ್ವಿಯಾಗಿ ಹೊರಗೆ ಬರಲಿ.ಸಿಎಂ ಮೇಲೆ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ಕೊಟ್ಟಿದ್ದಾರೆ. ಪ್ರಜಾಪ್ರಭುತ್ವದಲ್ಲಿ ಕಾನೂನಿಗೆ ಗೌರವ ಕೊಡಬೇಕು ಎಂದು ಹೇಳಿದರು.

 

Related Post