Breaking
Sun. Sep 8th, 2024

ಶಿಕಾರಿಪುರದಲ್ಲಿ ಕಾಂಗ್ರೆಸ್‌ ಪ್ರತಿಭಟನೆ, ಬಿಎಸ್‌ ವೈ ಮನೆಗೆ ಮುತ್ತಿಗೆ ಯತ್ನ

By Mooka Nayaka News Aug 18, 2024
Spread the love

ಶಿವಮೊಗ್ಗ: ಸಿಎಂ ಸಿದ್ದರಾಮಯ್ಯ ವಿರುದ್ದ ಷಡ್ಯಂತ್ರ ರೂಪಿಸಿದ್ದಾರೆಂದು ಆರೋಪಿಸಿ ಕಾಂಗ್ರೆಸ್‌ ಕಾರ್ಯಕರ್ತರು ಮಾಜಿ ಸಿಎಂ ಬಿಎಸ್‌ ಯಡಿಯೂರಪ್ಪ ಮನೆಗೆ ಮತ್ತಿಗೆ ಹಾಕಲು ಯತ್ನಿಸಿದರು.

ಶಿಕಾರಿಪುರ ಪಟ್ಟಣದಲ್ಲಿ ಪ್ರತಿಭಟನೆ ನಡೆಸಿದ ಕಾಂಗ್ರೆಸ್ ಕಾರ್ಯಕರ್ತರು ಪಟ್ಟಣದಲ್ಲಿರುವ ಬಿಎಸ್ ವೈ ಮನೆಗೆ ಮುತ್ತಿಗೆ ಹಾಕಲು ಯತ್ನಿಸಿದರು. ಈ ವೇಳೆ ಪೊಲೀಸರು ಪ್ರತಿಭಟನಾಕಾರರನ್ನು ವಶಕ್ಕೆ ಪಡೆದರು.

ಕಾಂಗ್ರೆಸ್ ನಾಯಕ ನಾಗರಾಜ್ ಗೌಡ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಗಿದೆ. ಶಿಕಾರಿಪುರ ಪಟ್ಟಣದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಹೈಡ್ರಾಮ ನಡೆಸಿದರು. ಪೊಲೀಸರು ರಸ್ತೆ ಮಧ್ಯೆಯೆ ಪ್ರತಿಭಟನಾಕಾರರನ್ನು ತಡೆದರು. ನೂರಾರು ಕಾಂಗ್ರೆಸ್ ಕಾರ್ಯಕರ್ತರ ವಶಕ್ಕೆ ಪಡೆದರು.

Related Post