ನವದೆಹಲಿ: ವಾಹನ ತಪಾಸಣೆ ನೆಪದಲ್ಲಿ ವಾಹನ ಸವಾರರಿಂದ ಪಡೆದ ಲಂಚದ ಹಣವನ್ನು ಮೂವರು ಟ್ರಾಫಿಕ್ ಪೊಲೀಸರು ಹಂಚಿಕೊಳ್ಳುತ್ತಿರುವ ವಿಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದು ಇದರ ಹಿನ್ನೆಲೆಯಲ್ಲಿ ಅಪರಾಧವೆಸಗಿದ ಮೂವರು ಟ್ರಾಫಿಕ್ ಪೊಲೀಸರನ್ನು ಅಮಾನತುಗೊಳಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಗಾಜಿಪುರ ಪೊಲೀಸ್ ಠಾಣೆಯಾ ಎದುರುಭಾಗದಲ್ಲಿ ಇಲ್ಲಿನ ಕಲ್ಯಾಣಪುರಿ ವೃತ್ತದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಂಚಾರಿ ಪೊಲೀಸರು ಸಣ್ಣ ಶೆಡ್ ಮಾಡಿಕೊಂಡು ಅಲ್ಲಿ ವಾಹನ ಸವಾರರನ್ನು ದಾಖಲೆ ಪರಿಶೀಲನೆ ನೆಪದಲ್ಲಿ ಸುಲಿಗೆ ಮಾಡಲಾಗುತ್ತಿದ್ದು ಅದರಲ್ಲಿ ಬಂದ ದುಡ್ಡನ್ನು ಮೂವರು ಸಂಚಾರಿ ಪೊಲೀಸರು ಹಂಚಿಕೊಳ್ಳುತ್ತಿದ್ದರು ಎನ್ನಲಾಗಿದೆ .
ಅಲ್ಲದೆ ಇದಕ್ಕೆ ಪೂರಕ ಎಂಬಂತೆ ಅಲ್ಲಿನ ಸಿಸಿ ಕ್ಯಾಮೆರಾದಲ್ಲಿ ಈ ಮೂವರು ಸಂಚಾರಿ ಪೊಲೀಸರು ಹಣ ಹಂಚಿಕೊಳ್ಳುತ್ತಿರುವ ವಿಡಿಯೋ ವೈರಲ್ ಆಗಿದೆ.
ಇತ್ತ ವಿಡಿಯೋ ವೈರಲ್ ಆಗುತ್ತಿದ್ದಂತೆ ತನಿಖೆ ನಡೆಸಿದ ಹಿರಿಯ ಪೊಲೀಸ್ ಅಧಿಕಾರಿ ಮೂವರನ್ನು ಅಮಾನತು ಮಾಡಿ ಆದೇಶ ಹೊರಡಿಸಿದೆ.