Breaking
Sun. Sep 8th, 2024

ರಾಜ್ಯದ ಎಲ್ಲಾ ‘ಸರ್ಕಾರಿ ಶಾಲೆ’ಗಳಲ್ಲಿ ‘LKG, UKG’ ಆರಂಭ: ಸಚಿವ ಮಧು ಬಂಗಾರಪ್ಪ

By Mooka Nayaka News Aug 20, 2024
Spread the love

ಬೆಂಗಳೂರು: ರಾಜ್ಯದ ಎಲ್ಲ ಸರ್ಕಾರಿ ಶಾಲೆಗಳಲ್ಲಿ ಎಲ್ ಕೆ ಜಿ ಹಾಗೂ ಯುಕೆಜಿಯನ್ನು ಆರಂಭಿಸಲಾಗುತ್ತದೆ ಎಂದು ಹೇಳುವ ಮೂಲಕ ಸಚಿವ ಮಧು ಬಂಗಾರಪ್ಪ ಮಕ್ಕಳ ಪೋಷಕರಿಗೆ ಗುಡ್ ನ್ಯೂಸ್ ನೀಡಿದ್ದಾರೆ.

ಈ ಕುರಿತಂತೆ ಮಾಹಿತಿ ನೀಡಿರುವಂತ ಅವರು, ಕಲ್ಯಾಣ ಕರ್ನಾಟಕದ 1 ಸಾವಿರ ಸರ್ಕಾರಿ ಶಾಲೆಗಳಲ್ಲಿ ಎಲ್‌ಕೆಜಿ, ಯುಕೆಜಿ ಆರಂಭಿಸಿದ್ದು, ಮುಂದಿನ ದಿನಗಳಲ್ಲಿ ರಾಜ್ಯದ ಎಲ್ಲ ಶಾಲೆಗಳಲ್ಲೂ ಆರಂಭಿಸಲಾಗುವುದು ಎಂದು ತಿಳಿಸಿದ್ದಾರೆ.

ಮಕ್ಕಳಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಒಂದೇ ಸೂರಿನಡಿ ಎಲ್ ಕೆಜಿ, ಯುಕೆಜಿಯಿಂದ 12ನೇ ತರಗತಿಯವರೆಗೆ ಶಿಕ್ಷಣ ಕಲ್ಪಿಸುವಂತ ಕೆಲಸವನ್ನು ಸರ್ಕಾರ ಮಾಡಲಿದೆ ಎಂದರು.

ರಾಜ್ಯದಲ್ಲಿ ಗುಣಮಟ್ಟದ ಶಿಕ್ಷಣಕ್ಕೆ ಒತ್ತು ನೀಡಲಾಗುತ್ತಿದೆ. ಇದಕ್ಕಾಗಿ ಶಿಕ್ಷಕರು ಕೊರತೆಯಿರುವಂತ ಶಾಲೆಗಳಿಗೆ 45 ಸಾವಿರ ಅತಿಥಿ ಶಿಕ್ಷಕರನ್ನು ನಿಯೋಜಿಸಲಾಗಿದೆ. ಸದ್ಯದಲ್ಲೇ 5,000 ಶಿಕ್ಷಕರ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗುತ್ತದೆ. ಈಗಾಗಲೇ 1200 ಶಿಕ್ಷಕರನ್ನು ನೇಮಕ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

 

 

Related Post