Trending

ಶಿವಮೊಗ್ಗ : ಸಂಪೂರ್ಣ ತುಂಡಾದ ಕೈಯನ್ನು ಯಶಸ್ವಿಯಾಗಿ ಮರುಜೋಡಿಸಿದ ಸರ್ಜಿ ಆಸ್ಪತ್ರೆ ವೈದ್ಯರು

Spread the love

ಶಿವಮೊಗ್ಗ: ಎರಡು ತುಂಡಾಗಿದ್ದ ಕೈಗೆ ಶಸ್ತ್ರ ಚಿಕಿತ್ಸೆ ನಡೆಸಿ, ಮರು ಜೋಡಿಸುವ ಮೂಲಕ ಅಪರೂಪದ ಸಾಧನೆ ಮಾಡುವಲ್ಲಿ ಇಲ್ಲಿನ ಸರ್ಜಿ ಸೂಪರ್ ಸ್ಪೆಷಾಲಿಟಿ ತಜ್ಞ ವೈದ್ಯರ ತಂಡ ಯಶಸ್ಸು ಸಾಧಿಸಿ ರೋಗಿಗೆ ಮರು ಜೀವನವನ್ನು ಕಲ್ಪಿಸಿದೆ.

ಜಿಲ್ಲೆಯ ಸಾ ಮಿಲ್ ವೊಂದರಲ್ಲಿ ಕೆಲಸ ಮಾಡುತ್ತಿದ್ದ 35 ವರ್ಷದ ಕಾರ್ಮಿಕರೊಬ್ಬರ ಕೈ ಆಕಸ್ಮಿಕವಾಗಿ ಮರ ಕೊಯ್ಯುವ ಯಂತ್ರಕ್ಕೆ ಸಿಲುಕಿ ಎರಡು ತುಂಡಾಗಿತ್ತು. ಸಂಪೂರ್ಣ ಕತ್ತರಿಸಿದ ಮುಂಗೈಯನ್ನು ಐಸ್ ಬಾಕ್ಸ್ ನಲ್ಲಿ ಇಟ್ಟುಕೊಂಡು ರೋಗಿಯು ಆಸ್ಪತ್ರೆಯ ಅಪಘಾಥ ವಿಭಾಗಕ್ಕೆ ದಾಖಲಾಗಿದ್ದರು. ಆಸ್ಪತ್ರೆಯಲ್ಲಿ ಸತತವಾಗಿ 7 ಗಂಟೆಗಳ ಕಾಲ ಶಸ್ತ್ರಚಿಕಿತ್ಸೆ ಮಾಡಿದ್ದು, ಮುಂಗೈನ ಮಾಂಸಖಂಡ, ಮೂಳೆ ಹಾಗೂ ನರಗಳನ್ನು ಯಶಸ್ವಿಯಾಗಿ ಮರು ಜೋಡಿಸಿ ರೋಗಿಗೆ ಹೊಸ ಬದುಕು ಕೊಟ್ಟಿದ್ದಾರೆ.

ರೋಗಿಗೆ ಉತ್ತಮ ಆರೈಕೆ ಮಾಡಿ ಒಂದು ವಾರದ ಬಳಿಕ ಡಿಸ್ಚಾರ್ಜ್ ಮಾಡಲಾಗಿತ್ತು, ಆನಂತರ ಕಾಲ ಕಾಲಕ್ಕೆ ತಪಾಸಣೆ ನಡೆಸಿ, ಇದೀಗ ಕೈ ಚಲನವಲನ ಚೆನ್ನಾಗಿದ್ದು, ರೋಗಿಯು ಚೇತರಿಸಿಕೊಂಡಿದ್ದಾರೆ. ಸರ್ಜಿ ಆಸ್ಪತ್ರೆಯ ಪ್ಲಾಸ್ಟಿಕ್ ಸರ್ಜನ್ ಡಾ.ಚೇತನ್ ಹಾಗೂ ಮೂಳೆ ರೋಗ ತಜ್ಞರಾದ ಡಾ.ಮಂಜುನಾಥ್, ವೈದ್ಯಕೀಯ ಅಧೀಕ್ಷಕ ಹಾಗೂ ಅರಿವಳಿಕೆ ತಜ್ಞರಾದ ಡಾ. ವಾದಿರಾಜ ಕುಲಕರ್ಣಿ ಮತ್ತು ಡಾ.ಮೂರ್ಕಣಪ್ಪ, ಡಾ.ಸಂತೋಷ್, ಡಾ. ಅರ್ಜುನ್ ಅವರ ತಂಡ ಈ ಶಸ್ತ್ರಚಿಕಿತ್ಸೆಯನ್ನು ಯಶಸ್ವಿಯಾಗಿ ನಡೆಸಿದೆ.

[pj-news-ticker]