Breaking
Sun. Sep 8th, 2024

ಅಂತಾರಾಷ್ಟ್ರೀಯ, ದೇಶೀಯ ಕ್ರಿಕೆಟ್‌ಗೆ ಶಿಖರ್‌ ಧವನ್‌ ನಿವೃತ್ತಿ ಘೋಷಣೆ

By Mooka Nayaka News Aug 24, 2024
Spread the love

ನವದೆಹಲಿ: ಟೀಂ ಇಂಡಿಯಾ ಆಟಗಾರ ಶಿಖರ್‌ ಧವನ್‌ ದೇಶೀಯ, ಅಂತಾರಾಷ್ಟ್ರೀಯ ಸೇರಿದಂತೆ ಎಲ್ಲಾ ಮಾದರಿಯ ಕ್ರಿಕೆಟ್ ಪಂದ್ಯಕ್ಕೆ ನಿವೃತ್ತಿ ಘೋಷಿಸಿದ್ದಾರೆ.

38 ವರ್ಷದ ಶಿಖರ್‌ ಧವನ್‌ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋವನ್ನು ಹಂಚಿಕೊಳ್ಳುವ ಮೂಲಕ ನಿವೃತ್ತಿ ನಿರ್ಧಾರ ಪ್ರಕಟಿಸಿದ್ದಾರೆ. ಕಳೆದ ಎರಡು ವರ್ಷಗಳಿಂದ ತಂಡದಲ್ಲಿ ಅವರು ಸ್ಥಾನ ಪಡೆದಿರಲಿಲ್ಲ. ನಾನು ನನ್ನ ಕ್ರಿಕೆಟ್ ಅಧ್ಯಾಯವನ್ನು ಕೊನೆಗೊಳಿಸುತ್ತಿದ್ದೇನೆ. ಅಸಂಖ್ಯಾತ ನೆನಪುಗಳು ಮತ್ತು ಕೃತಜ್ಞತೆಗಳನ್ನು ನಾನು ಹೊತ್ತುಕೊಂಡು ಹೋಗುತ್ತಿದ್ದೇನೆ. ಪ್ರೀತಿ ಮತ್ತು ಬೆಂಬಲಕ್ಕಾಗಿ ಧನ್ಯವಾದಗಳು. ಜೈ ಹಿಂದ್! ಎಂದು ತಮ್ಮ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

ಮೊದಲಿಗೆ ನನ್ನ ಕುಟುಂಬ, ನನ್ನ ಬಾಲ್ಯದ ಕೋಚ್ ತಾರಕ್ ಸಿನ್ಹಾ ಮತ್ತು ಮದನ್ ಶರ್ಮಾ ಅವರ ಮಾರ್ಗದರ್ಶನದಲ್ಲಿ ನಾನು ಕ್ರಿಕೆಟ್ ಕಲಿತಿದ್ದೇನೆ. ಭಾರತ ತಂಡವನ್ನು ಸೇರಬೇಕು ಎನ್ನುವುದು ನನ್ನ ಗುರಿಯಾಗಿತ್ತು. ಸೇರಿದ ನಂತರ ಇಡೀ ತಂಡ, ಕುಟುಂಬ, ಅಭಿಮಾನಿಗಳಿಂದ ಬೆಂಬಲ ಸಿಕ್ಕಿತು. ಈಗ ವಿದಾಯ ಹೇಳುವ ಸಮಯ ಬಂದಿದೆ. ಜೀವನದಲ್ಲಿ ಮುಂದುವರಿಯಲು ಪುಟವನ್ನು ತಿರುಗಿಸುವುದು ಮುಖ್ಯ. ಅದಕ್ಕಾಗಿಯೇ ನಾನು ಅಂತರರಾಷ್ಟ್ರೀಯ ಮತ್ತು ದೇಶೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸುತ್ತಿದ್ದೇನೆ. ನೆಮ್ಮದಿಯಿಂದ ನಿರ್ಗಮಿಸುತ್ತಿದ್ದೇನೆ ಎಂದು ಹೇಳಿದ್ದಾರೆ.

2010ರಲ್ಲಿ ಆಸ್ಟ್ರೇಲಿಯಾ ವಿರುದ್ಧ ಏಕದಿನ ಪಂದ್ಯದ ಮೂಲಕ ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದ್ದ ಧವನ್, ಮೂರೂ ಮಾದರಿಯ ಕ್ರಿಕೆಟ್‌ನಲ್ಲಿ ಭಾರತವನ್ನು ಪ್ರತಿನಿಧಿಸಿದ್ದರು.‌

ನನ್ನ ದೇಶಕ್ಕಾಗಿ ನಾನು ಸಾಕಷ್ಟು ಆಡಿದ್ದೇನೆ ಎಂಬ ತೃಪ್ತಿ ನನಗಿದೆ. ನನಗೆ ಈ ಅವಕಾಶವನ್ನು ನೀಡಿದ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ದೆಹಲಿ ಮತ್ತು ಜಿಲ್ಲಾ ಕ್ರಿಕೆಟ್ ಸಂಸ್ಥೆಗೆ ಧನ್ಯವಾದ ಅರ್ಪಿಸುತ್ತೇನೆ ಎಂದು ಹೇಳಿದ್ದಾರೆ.

ಧವನ್ ಭಾರತದ ಪರ 34 ಟೆಸ್ಟ್, 167 ಒಡಿಐ ಹಾಗೂ 67 ಟಿ–20 ಅಂತರರಾಷ್ಟ್ರೀಯ ಪಂದ್ಯಗಳನ್ನು ಆಡಿದ್ದಾರೆ. ಏಕದಿನ ಮಾದರಿಯಲ್ಲಿ 44.11 ಸರಾಸರಿಯಲ್ಲಿ 6793 ರನ್ ಗಳಿಸಿದ್ದಾರೆ. ಟೆಸ್ಟ್ ಕ್ರಿಕೆಟ್‌ನಲ್ಲಿ 40.61ರ ಸರಾಸರಿಯಲ್ಲಿ 2315 ರನ್ ಗಳಿಸಿದ್ದಾರೆ.

2013ರ ಚಾಂಪಿಯನ್ಸ್ ಟ್ರೋಫಿಯಲ್ಲಿ ಶಿಖರ್ ಧವನ್ ಹಾಗೂ ರೋಹಿತ್ ಶರ್ಮಾ ಆರಂಭಿಕ ಜೋಡಿ ಉತ್ತಮ ಪ್ರದರ್ಶನ ನೀಡಿತ್ತು. ಮತ್ತು ನನ್ನ ಎಲ್ಲಾ ಅಭಿಮಾನಿಗಳಿಗೆ ನಾನು ನಿಜವಾಗಿಯೂ ಕೃತಜ್ಞನಾಗಿದ್ದೇನೆ ಎಂದು ತಿಳಿಸಿದರು.

 

 

Related Post