ಶಿವಮೊಗ್ಗ: ಭದ್ರಾವತಿ ತಾಲೂಕಿನಲ್ಲಿ ಕೆಲ ದಿನಗಳಿಂದ ಆತಂಕ ಸೃಷ್ಟಿಸಿದ್ದ ಕರಡಿಯೊಂದು ರವಿವಾರ ಸೆರೆಯಾಗಿದೆ.
ಭದ್ರಾವತಿ ತಾಲೂಕಿನ ತಟ್ಟೆಹಳ್ಳಿ ಗ್ರಾಮದ ಚೌಡೇಶ್ವರಿ ದೇವಸ್ಥಾನದ ಆವರಣದಲ್ಲಿ ಇರಿಸಿದ್ದ ಬೋನಿಗೆ ಕರಡಿ ಸೆರೆಯಾಗಿದೆ. ಕರಡಿ ಉಪಟಳದಿಂದ ಸಂಕಷ್ಟ ಅನುಭವಿಸಿದ್ದ ಸುತ್ತಮುತ್ತಲಿನ ಗ್ರಾಮಸ್ಥರು ಇದೀಗ ನಿಟ್ಟುಸಿರು ಬಿಟ್ಟಿದ್ದಾರೆ.
ಅಗಸನಹಳ್ಳಿ, ಎಮ್ಮೆಹಟ್ಟಿ, ಕೆರೆಬೀರನಹಳ್ಳಿ, ತಿಮ್ಲಾಪುರ ಕ್ಯಾಂಪ್ ಸೇರಿದಂತೆ ಸುತ್ತಮುತ್ತ ಗ್ರಾಮಗಳಲ್ಲಿ ಕರಡಿ ಆತಂಕಕ್ಕೆ ಕಾರಣವಾಗಿತ್ತು.
ಕರಡಿ ಬೋನಿಗೆ ಬಿದ್ದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಸೆರೆಯಾದ ಕರಡಿ ನೋಡಲು ಜನ ಮುಗಿಬಿದ್ದಿದ್ದಾರೆ. ಕರಡಿ ನೋಡಲು ಜನರು ಸಾಲುಗಟ್ಟಿ ನಿಂತಿದ್ದಾರೆ. ಜನರನ್ನು ನಿಯಂತ್ರಿಸಲು ಅರಣ್ಯಾಧಿಕಾರಿಗಳು ಹರಸಾಹಸ ಪಡುತ್ತಿದ್ದಾರೆ.