ಬೆಂಗಳೂರು : ಇಸ್ರೋ ಮಾಜಿ ಅಧ್ಯಕ್ಷ ಕಸ್ತೂರಿ ರಂಗನ್ ಅವರಿಗೆ ಲಘು ಹೃದಯಾಘಾತವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಶ್ರೀಲಂಕಾದ ಕೊಲೊಂಬೊದಲ್ಲಿ ಖ್ಯಾತ ವಿಜ್ಞಾನಿ ಕಸ್ತೂರಿ ರಂಗನ್ ಅವರಿಗೆ ಲಘು ಹೃದಯಾಘಾತವಾಗಿದ್ದು, ಅವರನ್ನು ಏರ್‌ಲಿಫ್ಟ್ ಮೂಲಕ ಬೆಂಗಳೂರಿಗೆ ಕರೆತರಲಾಗುತ್ತಿದೆ. ಸಂಜೆ 5.30ರ ವೇಳೆಗೆ ಆಗಮಿಸಲಿದ್ದು ಬೆಂಗಳೂರಿನ ನಾರಾಯಣ ಹೃದಯಾಲಯದಲ್ಲಿ ಚಿಕಿತ್ಸೆ ನೀಡಲಾಗುತ್ತದೆ ಎಂದು ಹೇಳಲಾಗುತ್ತಿದೆ.
ಕಸ್ತೂರಿ ರಂಗನ್ ಅವರು ಸುಮಾರು ಒಂದು ದಶಕದ ಕಾಲ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಮುಖ್ಯಸ್ಥರಾಗಿ ಸೇವೆ ಸಲ್ಲಿಸಿದ್ದರು.