Spread the love

ಬೆಂಗಳೂರು : ಅಕ್ಕಿ ಬದಲಿಗೆ ನೀಡುವ ಹಣ ಆಹಾರ ಪದಾರ್ಥಗಳ ಖರೀದಿಗೆ ಮಾತ್ರ ಬಳಸಿಬೇಕು ಎಂದು  ಸಿಎಂ ಸಿದ್ಧರಾಮಯ್ಯ ಮನವಿ ಮಾಡಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಸಿಎಂ ಸಿದ್ಧರಾಮಯ್ಯ, ಹಸಿವಿನ ಬೇನೆ ನಾಡಿನ ಬಡಜನರನ್ನು ಬಾಧಿಸದಿರಲಿ ಎಂಬ ಸದುದ್ದೇಶದೊಂದಿಗೆ ನಾವು ಇಂದಿನಿಂದ ‘ಅನ್ನಭಾಗ್ಯ’ ಯೋಜನೆಯಡಿ ಬಡಕುಟುಂಬದ ಪ್ರತಿ ವ್ಯಕ್ತಿಗೆ ತಲಾ 5 ಕೆ.ಜಿ ಅಕ್ಕಿ ಹಾಗೂ ರೂ. 170 ನೀಡಲಿದ್ದೇವೆ.

ಹೆಚ್ಚುವರಿ 5 ಕೆ.ಜಿ ಅಕ್ಕಿಯ ಬದಲಿಗೆ ನೀಡುವ ಹಣವನ್ನು ಆಹಾರ ಪದಾರ್ಥಗಳ ಖರೀದಿಗೆ ಮಾತ್ರ ಬಳಕೆ ಮಾಡಬೇಕೆಂದು ನಾಡ ಬಾಂಧವರಲ್ಲಿ ಮನವಿ ಮಾಡುತ್ತೇನೆ. ಹಸಿವಿನ ಸಂಕಟ ಅನುಭವಿಸಿದವರಿಗೆ ಮಾತ್ರ ಅರಿವಿರಲು ಸಾಧ್ಯ. ಹಸಿವುಮುಕ್ತ ಕರ್ನಾಟಕ ನಿರ್ಮಾಣದ ನಮ್ಮ ಪ್ರಯತ್ನಕ್ಕೆ ನಿಮ್ಮ ಸಹಕಾರವಿರಲಿ ಎಂದು ಟ್ವಿಟ್ಟರ್ ನಲ್ಲಿ ಸಿಎಂ ಸಿದ‍್ಧರಾಮಯ್ಯ ಹೇಳಿದ್ದಾರೆ.

Leave a Reply

Your email address will not be published. Required fields are marked *