ಇಸ್ಲಾಮಾಬಾದ್: ಪಾಕಿಸ್ತಾನ ಚುನಾವಣಾ ಆಯೋಗ ಮಂಗಳವಾರ ಮಾಜಿ ಪ್ರಧಾನಿ ಇಮ್ರಾನ್ ಖಾನ್ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್ ಹೊರಡಿಸಿದೆ.
ಚುನಾವಣಾ ಆಯೋಗದ ವಿರುದ್ಧದ ನಿಂದನೆ ಪ್ರಕರಣದಲ್ಲಿ ಇಮ್ರಾನ್ ಖಾನ್ ಹಾಗೂ ಮಾಜಿ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಫವಾದ್ ಚೌಧರಿ ವಿರುದ್ಧ ಪಾಕಿಸ್ತಾನದ ಚುನಾವಣಾ ಆಯೋಗ(ಇಸಿಪಿ) ಜಾಮೀನು ರಹಿತ ಬಂಧನ ವಾರಂಟ್ ಹೊರಡಿಸಿದೆ.
ಚುನಾವಣಾ ಆಯೋಗ ಮತ್ತು ಮುಖ್ಯ ಚುನಾವಣಾ ಆಯುಕ್ತ(ಸಿಇಸಿ)ರ ವಿರುದ್ಧ ‘ಅವಹೇಳನಕಾರಿ’ ಭಾಷೆ ಬಳಸಿದ್ದಾರೆ ಎಂದು ಆರೋಪಿಸಿ ಪಾಕಿಸ್ತಾನ್ ತೆಹ್ರೀಕ್-ಇ-ಇನ್ಸಾಫ್(ಪಿಟಿಐ) ಮುಖ್ಯಸ್ಥ ಇಮ್ರಾನ್ ಖಾನ್ ಮತ್ತು ಪಕ್ಷದ ಮಾಜಿ ನಾಯಕರಾದ ಚೌಧರಿ ಹಾಗೂ ಅಸಾದ್ ಉಮರ್ ವಿರುದ್ಧ ದೂರು ನೀಡಲಾಗಿತ್ತು.
ಈ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ಜಾರಿಗೊಳಿಸಿದರೂ ಹಾಜರಾಗದ ಇಮ್ರಾನ್ ಖಾನ್ ವಿರುದ್ಧ ಆಯೋಗ ವಾರಂಟ್ ಜಾರಿ ಮಾಡಿದೆ.