Breaking
Sun. Sep 8th, 2024

ಆಹಾರ ಅರಸಿ ನಾಡಿಗೆ ಬಂದ ಕಾಡಾನೆ ವಿದ್ಯುತ್ ತಂತಿ ಸ್ಪರ್ಶಿಸಿ ಮೃತ್ಯು…

By Mooka Nayaka News Aug 27, 2024
Spread the love

ಚಿಕ್ಕಮಗಳೂರು: ಆಹಾರ ಅರಸಿ ನಾಡಿಗೆ ಬಂದ ಕಾಡಾನೆಯೊಂದು ವಿದ್ಯುತ್ ತಂತಿ ಸ್ಪರ್ಶಿಸಿ ಮೃತಪಟ್ಟಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕೊಳಗಾಮೆಯ ಆಶ್ರಯ ಎಸ್ಟೇಟ್ ಬಳಿ ನಡೆದಿದೆ.

ಇಲ್ಲಿನ ಭದ್ರಾ ಅಭಯಾರಣ್ಯದಿಂದ ಆಹಾರ ಅರಸಿ ಬಂದಿದ್ದ ಕಾಡಾನೆ ಬೇಲಿ ದಾಟುವ ವೇಳೆ ಇಲ್ಲಿನ ತೋಟಕ್ಕೆ ಅಳವಡಿಸಿದ್ದ ವಿದ್ಯುತ್ ತಂತಿ ಸ್ಪರ್ಶಿಸಿ ಸ್ಥಳದಲ್ಲೇ ಮೃತಪಟ್ಟಿದೆ ಎನ್ನಲಾಗಿದೆ.

ಸ್ಥಳಕ್ಕೆ ಅರಣ್ಯ ಅಧಿಕಾರಿಗಳು ಭೇಟಿ ಪರಿಶೀಲನೆ ನಡೆಸಿದ್ದು ತೋಟದ ಮಾಲೀಕರ ವಿರುದ್ಧ ಪ್ರಕರಣ ದಾಖಲುಗೊಂಡಿದೆ.

Related Post