Breaking
Sun. Sep 8th, 2024

ಓಮಾನ್ ನಲ್ಲಿ ಭೀಕರ ರಸ್ತೆ ಅಪಘಾತ: ಬೆಳಗಾವಿ ಮೂಲದ ನಾಲ್ವರು ಸಜೀವ ದಹನ

By Mooka Nayaka News Aug 30, 2024
Spread the love

ಬೆಳಗಾವಿ: ಓಮಾನ್ ದೇಶದ ಹೈಮಾ ಎಂಬಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೆಳಗಾವಿ ಜಿಲ್ಲೆಯ ಗೋಕಾಕ್ ನಗರದ ಒಂದೇ ಕುಟುಂಬದ ನಾಲ್ವರು ಮೃತಪಟ್ಟಿದ್ದಾರೆ ಎಂಬ ಮಾಹಿತಿ ತಿಳಿದುಬಂದಿದೆ. ವಿಜಯಾ ತಹಶಿಲ್ದಾರ, ಪೂಜಾ, ಪವನ್ ಕುಮಾರ ಮತ್ತು ಆದಿಶೇಷ ಮೃತಪಟ್ಟವರಾಗಿದ್ದಾರೆ.

ಈ ನಾಲ್ವರು ಓಮಾನ್ಗೆ ಪ್ರವಾಸಕ್ಕೆ ತೆರಳಿದ್ದರು. ಹೈಮಾ ಎಂಬ ಪ್ರದೇಶದಲ್ಲಿ ಹೋಗುತ್ತಿದ್ದ ವೇಳೆ ಕಾರು ಮತ್ತು ಲಾರಿ ಮುಖಾಮುಖಿ ಡಿಕ್ಕಿಯಾಗಿದೆ.

ಡಿಕ್ಕಿ ರಭಸಕ್ಕೆ ಕಾರಿಗೆ ಬೆಂಕಿ ಹೊತ್ತಿಕೊಂಡು, ನಾಲ್ವರು ಸಜೀವ ದಹನವಾಗಿದ್ದಾರೆ. ಮೃತರ ಶವಗಳನ್ನು ಭಾರತಕ್ಕೆ ತರಲು ವಿದೇಶಾಂಗ ಇಲಾಖೆ ಮೂಲಕ ಸಕಲ ಪ್ರಯತ್ನಗಳನ್ನು ಮಾಡಲಾಗುತ್ತಿದೆ. ವಿದೇಶಾಂಗ ಸಚಿವ ಎಸ್ ಜೈಶಂಕರ್ ಹಾಗೂ ಸಚಿವ ಪ್ರಹ್ಲಾದ್ ಜೋಶಿ ಅವರಿಗೆ ಮನವಿ ಮಾಡಿದ್ದೇನೆ ಎಂದು ರಾಜ್ಯಸಭಾ ಸದಸ್ಯ ಈರಣ್ಣ ಬಿ ಕಡಾಡಿ ತಿಳಿಸಿದ್ದಾರೆ.

 

Related Post