ಶಿವಮೊಗ್ಗ : ವಿದ್ಯುತ್ ತಗುಲಿ ವೃದ್ಧೆ ದಾರುಣವಾಗಿ ಮೃತಪಟ್ಟಿರುವ ಘಟನೆ ಶಿವಮೊಗ್ಗ ಜಿಲ್ಲೆಯ ರಿಪ್ಪನಪೇಟೆಯ ಮಲ್ಲಾಪುರದಲ್ಲಿ ನಡೆದಿದೆ.
ಪಾರ್ವತಮ್ಮ (67) ಮೃತಪಟ್ಟ ದುರ್ದೈವಿ. ಭಾನುವಾರ ಬೆಳಗ್ಗೆ ಮನೆ ಮುಂಭಾಗದಲ್ಲಿರುವ ಉನುಗೋಲು ತೆಗೆಯುವಾಗ ಏಕಾಏಕಿ ವಿದ್ಯುತ್ ಪ್ರವಹಿಸಿ ಸ್ಥಳದಲ್ಲಿಯೇ ಒದ್ದಾಡಿ ಮೃತಪಟ್ಟಿದ್ದಾರೆ.
ಸ್ಥಳಕ್ಕೆ ರಿಪ್ಪನ್‌ಪೇಟೆ ಪಿಎಸ್‌ಐ ಪ್ರವೀಣ್ ಹಾಗೂ ಮೆಸ್ಕಾಂ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆ ಬಳಿಕ ಕುಟುಂಬಸ್ಥರಿಗೆ ಹಸ್ತಾಂತರ ಮಾಡಲಾಗಿದೆ. ರಿಪ್ಪನಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.