ಶಿವಮೊಗ್ಗ: ಆರೋಪಿ ನಟ ದರ್ಶನ್ ಗೆ ಪರಪ್ಪನ ಅಗ್ರಹಾರ ಜೈಲಿನಲ್ಲಿ ರಾಜಾತಿಥ್ಯ ನೀಡುತ್ತಿರುವ ಬಗ್ಗೆ ವರದಿಯಾದ ಬಳಿಕ ಇದೀಗ ರಾಜ್ಯದ ಎಲ್ಲಾ ಜೈಲುಗಳಲ್ಲಿ ಕಟ್ಟುನಿಟ್ಟಿನ ಶಿಸ್ತು ಪಾಲಿಸಲಾಗುತ್ತಿದೆ. ಹೀಗಾಗಿ ಈವರೆಗೆ ಕೆಲವು ಸೌಲಭ್ಯ ಪಡೆಯುತ್ತಿದ್ದ ಕೈದಿಗಳು ಇದೀಗ ಜೈಲಿನಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ.
ಶಿವಮೊಗ್ಗ ಕೇಂದ್ರ ಕಾರಗೃಹದಲ್ಲಿ ಜೈಲಿನಲ್ಲಿ ಕೈದಿಗಳು ಪ್ರತಿಭಟನೆ ನಡೆಸಿದ್ದಾರೆ. ಬೀಡಿ ಸಿಗುತ್ತಿಲ್ಲ ಎಂದು ಕೈದಿಗಳು ಪಟ್ಟು ಹಿಡಿದಿದ್ದಾರೆ.
ಸೋಗಾನೆ ಬಳಿ ಇರುವ ಕೇಂದ್ರ ಕಾರಗೃಹದಲ್ಲಿಯೂ ದರ್ಶನ್ ಪ್ರಕರಣದ ನಂತರ ಜೈಲು ವ್ಯವಸ್ಥೆಯನ್ನು ಕಠಿಣ ಮಾಡಲಾಗಿದೆ. ಹೀಗಾಗಿ ಇದೀಗ ಬೀಡಿ ನೀಡದ ಹಿನ್ನೆಲೆಯಲ್ಲಿ ಕೈದಿಗಳು ಬೀಡಿ ನೀಡಲು ಆಗ್ರಹಿಸುತ್ತಿದ್ದಾರೆ.