ಬೀದರ್ : ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಕಾಲಿಗೆ ಬಿದ್ದ ಮಾಜಿ ಸಚಿವ, ಹಾಲಿ ಬಿಜೆಪಿ ಶಾಸಕ ಪ್ರಭು ಚವ್ಹಾಣ್ ಅವರು ಬೀದರ್ ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಅನ್ನು ಭಗವಂತ ಖೂಬಾಗೆ ನೀಡಬಾರದು, ಒಳ್ಳೆಯ ವ್ಯಕ್ತಿಗೆ ನೀಡಬೇಕು ಎಂದು ಮನವಿ ಮಾಡಿದ್ದಾರೆ.
ಬೀದರ್‌ನಲ್ಲಿ ನಡೆಯುತ್ತಿರುವ ಬಿಜೆಪಿ ಜಿಲ್ಲಾಮಟ್ಟದ ಕಾರ್ಯಕ್ರಮದ ವೇದಿಕೆಯಲ್ಲಿ ಸಾವಿರಾರು ಜನರ ಮುಂದೆ ಈ ಘಟನೆ ನಡೆದಿದೆ.” ಹಾಲಿ ಸಂಸದ ಭಗವಂತ ಖೂಬಾ ಅವರು ಪಕ್ಷದ ಕಾರ್ಯಕರ್ತರ ಮೇಲೆ ಕೇಸ್ ಹಾಕಿಸಿ, ಜೈಲಿಗೆ ಕಳುಹಿಸಿದ್ದಾರೆ. ಪಕ್ಷದಲ್ಲೇ ಇದ್ದುಕೊಂಡು ಪಕ್ಷಕ್ಕೆ ಅನ್ಯಾಯ ಮಾಡಿದ್ದಾರೆ. ಹೀಗಾಗಿ, ಅವರಿಗೆ ಟಿಕೆಟ್ ನೀಡಬಾರದು ” ಎಂದು ಮನವಿ ಮಾಡಿದ ಚವ್ಹಾಣ್.