Breaking
Sun. Sep 8th, 2024

ಯಾವುದೇ ಕಾರಣಕ್ಕೂ ಸಿದ್ದರಾಮಯ್ಯ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ : ಬಿಎಸ್ ಯಡಿಯೂರಪ್ಪ

By Mooka Nayaka News Sep 4, 2024
Spread the love

ಶಿವಮೊಗ್ಗ : ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ಸಿಎಂ ಸಿದ್ದರಾಮಯ್ಯ ಅವರಿಗೆ ಈಗಾಗಲೇ ತೀವ್ರ ಸಂಕಷ್ಟ ಎದುರಾಗಿದ್ದು, ಇದರ ಮಧ್ಯೆ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಕೂಡ ಪ್ರಕರಣದ ಕುರಿತು ತೀರ್ಪು ಬಂದ ಬಳಿಕ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಪರಿಸ್ಥಿತಿ ಕೂಡ ಬರುತ್ತೆ ಎಂದು ಸ್ಪೋಟಕವಾದ ಭವಿಷ್ಯ ನುಡಿದಿದ್ದಾರೆ.

ಶಿವಮೊಗ್ಗದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಸಿದ್ದರಾಮಯ್ಯ ಮಾಡಿರುವ ಎಲ್ಲಾ ಹಗರಣಗಳು ಸಾಬೀತು ಆಗುತ್ತಿವೆ. ಯಾವುದೇ ಕಾರಣಕ್ಕೂ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ. ಮುಂದಿನ ದಿನಗಳಲ್ಲಿ ಏನಾಗುತ್ತೆ ಎಂದು ಈಗಲೇ ಹೇಳಲು ಸಾಧ್ಯವಿಲ್ಲ ಎಂದು ಶಿವಮೊಗ್ಗದಲ್ಲಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹೇಳಿಕೆ ನೀಡಿದರು.

ರಾಜ್ಯ ರಾಜಕಾರಣದಲ್ಲಿ ಎಲ್ಲಾ ಹಂತದಲ್ಲೂ ಬದಲಾವಣೆ ಆಗಲಿದೆ. ನಾವು ಯಾವುದೇ ಹೋರಾಟ ಮಾಡಲ್ಲ. ಆದರೆ ಸಿಎಂ ಸಿದ್ದರಾಮಯ್ಯ ಅವರ ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ನಲ್ಲಿ ತೀರ್ಪು ಬಂದ ಬಳಿಕ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವ ಸ್ಥಿತಿ ಬರಲಿದೆ ಎಂದು ಸ್ಪೋಟಕ ಭವಿಷ್ಯ ನುಡಿದಿದ್ದಾರೆ.

Related Post