ಪಣಜಿ: ಮುಂದಿನ ಐದು ದಿನಗಳ ಕಾಲ ಗೋವಾದಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಮುಂದಿನ ಐದು ದಿನಗಳ ಕಾಲ ಗೋವಾ ರಾಜ್ಯಾದ್ಯಂತ ಧಾರಾಕಾರ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಗೋವಾ, ಕೊಂಕಣ ಮತ್ತು ಮಧ್ಯ ಮಹಾರಾಷ್ಟ್ರದಲ್ಲಿ ಭಾರೀ ಮಳೆಯಾಗಲಿದೆ. ಈ ಅವಧಿಯಲ್ಲಿ 204.4 ಮಿ.ಮೀ ಮಳೆಯಾಗುವ ಮುನ್ಸೂಚನೆಯನ್ನು ಇಲಾಖೆ ನೀಡಿದೆ.
ಮುಂದಿನ ಐದು ದಿನಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇರುವುದರಿಂದ ಮುನ್ನೆಚ್ಚರಿಕೆ ವಹಿಸುವಂತೆ ಹವಾಮಾನ ಇಲಾಖೆ ನಾಗರಿಕರಿಗೆ ಮನವಿ ಮಾಡಿದೆ. ಅಪಾಯಕಾರಿ ಸ್ಥಳಗಳಿಗೆ ಅಥವಾ ನೀರಿನ ಮಟ್ಟ ಹೆಚ್ಚಿರುವ ಸ್ಥಳಗಳಿಗೆ ಹೋಗದಂತೆ ಇಲಾಖೆಯೂ ಮನವಿ ಮಾಡಿದೆ. ಮಂಗಳವಾರ ಕೂಡ ಗೋವಾ ರಾಜ್ಯಾದ್ಯಂತ ಭಾರಿ ಮಳೆಯಾಗುತ್ತಿದ್ದು ಜನಜೀವನ ಅಸ್ತವ್ಯಸ್ತಗೊಂಡಿದೆ.
ಕೊಂಕಣ, ಗೋವಾ ಮತ್ತು ಮಧ್ಯ ಮಹಾರಾಷ್ಟ್ರದಲ್ಲಿ ಜುಲೈ 20 ರಿಂದ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಿಸಿದೆ. ಗೋವಾ ಹವಾನಾನ ಇಲಾಖೆಯು ರಾಜ್ಯದಲ್ಲಿ 115.6 ರಿಂದ 204 ಮಿಮೀ ಮಳೆಯಾಗುವ ಮುನ್ಸೂಚನೆ ನೀಡಿದೆ.