ಶಿವಮೊಗ್ಗ : ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ಮತ್ತು ಜಾತಿನಿಂದನೆ ಆರೋಪದಡಿ ಖಾಸಗಿ ಕಾಲೇಜ್ ಪ್ರಿನ್ಸಿಪಾಲ್ ರನ್ನು ಕೋಟೆ ಠಾಣೆ ಪೊಲೀಸರು ಬಂಧಿಸಿದ್ದಾರೆ. ಫ್ರಾನ್ಸಿಸ್ ಫರ್ನಾಂಡಿಸ್ ಬಂಧಿತ ಪ್ರಿನ್ಸಿಪಾಲ್. ಫ್ರಾನ್ಸಿಸ್ ಫರ್ನಾಂಡಿಸ್ ಚರ್ಚ್ ಫಾದರ್ ಕೂಡ ಆಗಿದ್ದಾರೆ. ಸದ್ಯ ಫ್ರಾನ್ಸಿಸ್ ಫರ್ನಾಂಡಿಸ್ ವಿರುದ್ಧ ಪೋಕ್ಸೋ, ಅಟ್ರಾಸಿಟಿ ಕಾಯ್ದೆಯಡಿ ಕೇಸ್ ದಾಖಲಿಸಲಾಗಿದೆ.
ಸೆಕ್ರೆಡ್ ಹಾರ್ಟ್ ಕಾಲೇಜಿನ ಪಿಯುಸಿ ದ್ವಿತೀಯ ವರ್ಷದಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿಯನ್ನು ಪ್ರೀತಿಸುವ ನಾಟಕವಾಡಿದ್ದರು ಎನ್ನಲಾಗಿದೆ. ಎಸ್ಸಿಎಸ್ಟಿ ವಸತಿ ನಿಲಯದಲ್ಲಿದ್ದುಕೊಂಡು ವಿದ್ಯಾರ್ಥಿನಿ ವ್ಯಾಸಂಗ ಮಾಡುತ್ತಿದ್ದಳು. ಫರ್ನಾಂಡಿಸ್ ಕಿರುಕುಳದಿಂದ ವಿದ್ಯಾರ್ಥಿನಿ ನಿನ್ನೆ ಸಂಜೆ ಆತ್ಮಹತ್ಯೆಗೆ ಯತ್ನಿಸಿದ್ದು, ಬಳಿಕ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.