Breaking
Tue. Oct 8th, 2024

ತೀರ್ಥಹಳ್ಳಿ : ನೇಣು ಬಿಗಿದ ಸ್ಥಿತಿಯಲ್ಲಿ 9ನೇ ತರಗತಿ ವಿದ್ಯಾರ್ಥಿನಿಯ ಶವ ಪತ್ತೆ

By Mooka Nayaka News Jan 30, 2024
Spread the love

ತೀರ್ಥಹಳ್ಳಿ: 9ನೇ ತರಗತಿ ವಿದ್ಯಾರ್ಥಿನಿಯೊಬ್ಬಳ ಶವ ನೇಣು ಹಾಕಿಕೊಂಡ ಸ್ಥಿತಿಯಲ್ಲಿ ಸೋಮವಾರ ಬಸವಾನಿ ಸಮೀಪದ ಕಾಡೊಂದರಲ್ಲಿ ಪತ್ತೆಯಾಗಿದೆ.

ತಾಲೂಕಿನ ಬಸವಾನಿ ಗ್ರಾಮಪಂಚಾಯಿತಿ ವ್ಯಾಪ್ತಿಯ ಶುಂಠಿಕಟ್ಟೆ ಪ್ರೌಢ ಶಾಲೆಯಲ್ಲಿ 9ನೇ ತರಗತಿ ಓದುತ್ತಿದ್ದ ಪ್ರೀತಿ ಎಂಬಾಕೆ ಶಾಲೆಗೆ ಕಳೆದ 15 ದಿನಗಳಿಂದ ಹೋಗಿರಲಿಲ್ಲ. ಶಾಲೆಗೆ ಬರುವಂತೆ ತಿಳಿಸಲಾಗಿತ್ತು. ಮನೆಯಲ್ಲಿ ಕಾರಣ ಕೇಳಿದ್ದಕ್ಕೆ ಸೋಮವಾರ ಬಸವಾನಿ ಬಳಿಯ ಪ್ಲಾಂಟೇಷನ್ ನಲ್ಲಿ ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ತೀರ್ಥಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Related Post