Spread the love

ತೀರ್ಥಹಳ್ಳಿ : ರಾಷ್ಟ್ರೀಯ ಹೆದ್ದಾರಿ ತೀರ್ಥಹಳ್ಳಿ ಕೊಪ್ಪ ಶೃಂಗೇರಿ ಹೊಗುವ ರಸ್ತೆಯ ತಿರಳೇಬೈಲು ಕೆರೆ ತಿರುವಿನ ಸಮೀಪ ಶನಿವಾರ ಸಂಜೆ ವೇಳೆ ಎರಡು ಸ್ವಿಫ್ಟ್ ಕಾರುಗಳ ನಡುವೆ ಮುಖಾಮುಖಿ ಡಿಕ್ಕಿಯಾದ ಘಟನೆ ನಡೆದಿದೆ.

ಡಿಕ್ಕಿಯಾದ ರಭಸಕ್ಕೆ ಒಂದು ಕಾರಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದ್ದು ಕಾರಿನಲ್ಲಿದ್ದ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಪಟ್ಟಣದ ಜಯಚಾಮರಾಜೇಂದ್ರ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.

ತೀರ್ಥಹಳ್ಳಿಯಿಂದ ಕೊಪ್ಪ ಕಡೆ ಹೋಗುತ್ತಿದ್ದ ಸ್ವಿಫ್ಟ್ ಕಾರಿಗೆ ತೀರ್ಥಹಳ್ಳಿ ಕಡೆ ಬರುತ್ತಿದ್ದ ಸ್ವಿಫ್ಟ್ ಕಾರು ಡಿಕ್ಕಿಯಾಗಿ ಈ ಅವಘಡ ಸಂಭವಿಸಿದೆ. ಒಂದು ಕಾರಿನಲ್ಲಿ ಭದ್ರಾವತಿ ಮೂಲದವರು ಪ್ರಯಾಣಿಕರು ಇದ್ದರು ಎಂದು ತಿಳಿದು ಬಂದಿದ್ದು ಮತ್ತೊಬ್ಬರ ಬಗ್ಗೆ ತಿಳಿದು ಬಂದಿಲ್ಲ.

Leave a Reply

Your email address will not be published. Required fields are marked *