ಬೆಳಗಾವಿ :ಮುಖ್ಯಮಂತ್ರಿ ಸ್ಥಾನದಿಂದ ಸಿದ್ದರಾಮಯ್ಯ ಅವರನ್ನು ಕೆಳಗಿಳಿಸಲು ಕುತಂತ್ರ ನಡೆದಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಗಂಭೀರ ಆರೋಪ ಮಾಡಿದ್ದಾರೆ.
”ಬಿಜೆಪಿ ಯವರು ಉತ್ತಮವಾಗಿ ಆಡಳಿತ ನಡೆಸುವವರನ್ನು ಅಧಿಕಾರದಿಂದ ಕೆಳಗಿಳಿಸುವದರಲ್ಲಿ ಬಹಳ ನಿಸ್ಸೀಮರು. ಆದರೆ ಸಿದ್ದರಾಮಯ್ಯ ಅವರನ್ನು ಕೆಳಗಿಳಿಸುವದು ಯಾರಿಂದಲೂ ಸಾಧ್ಯವಿಲ್ಲ. ಅವರೇ ಮುಂದುವರಿಯಬೇಕು ಎಂಬುದು ನಮ್ಮೆಲ್ಲರ ಆಸೆ” ಎಂದರು.
”ಮುಡಾ ಪ್ರಕರಣದಲ್ಲಿ ಸಿದ್ದರಾಮಯ್ಯ ಅವರ ಯಾವುದೇ ಪಾತ್ರವಿಲ್ಲ. ನ್ಯಾಯಾಲಯದಲ್ಲಿ ಅವರ ಪರ ಆದೇಶ ಬರುವ ವಿಶ್ವಾಸವಿದೆ.ನಮ್ಮ ತಂದೆಯ ಕಾಲದಲ್ಲಿ ಇಂತಹ ಹಲವಾರು ಪ್ರಕರಣಗಳನ್ನು ನೋಡಿದ್ದೇನೆ. ಹೀಗಾಗಿ ಇದರ ಬಗ್ಗೆ ಚರ್ಚೆಯ ಅಗತ್ಯವಿಲ್ಲ” ಎಂದರು.