ರಾಂಚಿ: ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯ ಸರ್ಕಾರಿ ಶಾಲೆಯೊಂದರಲ್ಲಿ ಶಿಕ್ಷಕರೊಬ್ಬರು ತಮ್ಮ ಇಬ್ಬರು ಸಹೋದ್ಯೋಗಿಗಳನ್ನು ಗುಂಡಿಕ್ಕಿ ಕೊಂದು, ಬಳಿಕ ತಾನೂ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.
ರಾಂಚಿಯಿಂದ ಸುಮಾರು 300 ಕಿಮೀ ದೂರದಲ್ಲಿರುವ ಪೊರೈಯಾಹತ್ ಪ್ರದೇಶದ ಉನ್ನತೀಕರಿಸಿದ ಪ್ರೌಢಶಾಲೆಯಲ್ಲಿ ಬೆಳಗ್ಗೆ 11 ಗಂಟೆ ಸುಮಾರಿಗೆ ಶಾಲಾ ಸಮಯದಲ್ಲಿ ಈ ಘಟನೆ ನಡೆದಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ.
ಒಬ್ಬ ಮಹಿಳಾ ಶಿಕ್ಷಕಿ ಸೇರಿದಂತೆ ಇಬ್ಬರು ಶಿಕ್ಷಕರ ಶವಗಳು ಶಾಲೆಯ ಕೊಠಡಿಯಲ್ಲಿ ರಕ್ತದ ಮಡುವಿನಲ್ಲಿ ಬಿದ್ದಿರುವುದು ಕಂಡುಬಂದಿದೆ. ಆದರೆ ಆರೋಪಿ ಶಿಕ್ಷಕ ಸಹ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಗೊಡ್ಡಾ ಪೊಲೀಸ್ ವರಿಷ್ಠಾಧಿಕಾರಿ ನಾಥು ಸಿಂಗ್ ಮೀನಾ ಅವರು ಪಿಟಿಐಗೆ ತಿಳಿಸಿದ್ದಾರೆ.