ಮುಂಬಯಿ: ಬಾಂದ್ರಾದಲ್ಲಿ ಕಟ್ಟಡದ ಟೆರೇಸ್‌ನಿಂದ ಹಾರಿ ಬಾಲಿವುಡ್ ನಟಿ ಮಲೈಕಾ ಅರೋರಾ ಅವರ ತಂದೆ ಅನಿಲ್ ಅರೋರಾ ಇಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಉನ್ನತ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿದ್ದು, ಇದುವರೆಗೆ ಯಾವುದೇ ಡೇತ್ ನೋಟ್ ಪತ್ತೆಯಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಆತ್ಮಹತ್ಯೆಯ ಹಿಂದಿನ ಸಂಭವನೀಯ ಕಾರಣಗಳನ್ನು ಪೊಲೀಸರು ಇನ್ನೂ ನಿರ್ಧರಿಸಿಲ್ಲ.ಅಧಿಕಾರಿಗಳ ಪ್ರಕಾರ ಆಕೆಯ ತಂದೆ ಕಠಿಣ ನಿರ್ಧಾರ ತಳೆಯುವ ವೇಳೆ ನಟಿ ಮನೆಯಲ್ಲಿ ಇರಲಿಲ್ಲ ಎಂದು ತಿಳಿದು ಬಂದಿದೆ.