Spread the love

ಉಡುಪಿ: ಕರ್ನಾಟಕದ ವಿವಿಧ ಭಾಗಗಳ ಭಾರೀ ಮಳೆಯಾಗುತ್ತಿದ್ದು, ನದಿ-ಹಳ್ಳಗಳು ತುಂಬಿಹರಿಯುತ್ತಿವೆ. ಇದರಿಂದ ಎಚ್ಚರಿಕೆಯಿಂದ ಇರುವಂತೆ ಜಿಲ್ಲಾಡಳಿತಗಳು ಸಾರ್ವಜನಿಕರಲ್ಲಿ ಮನವಿ ಮಾಡಿವೆ. ಅದ್ಯಾವುದಕ್ಕೂ ಕ್ಯಾರೇ ಎನ್ನದ ಯುವಕನೋರ್ವ ರೀಲ್ಸ್ ಮಾಡಲು ಹೋಗಿ ಯುವಕನೊಬ್ಬ ತನ್ನ ಪ್ರಾಣಕ್ಕೆ ಕುತ್ತು ತಂದುಕೊಂಡಿದ್ದಾನೆ.

ಹೌದು…ರೀಲ್ಸ್  ಮಾಡಲು ಹೋಗಿ ಜಾರಿ ಜಲಪಾತಕ್ಕೆ  ಬಿದ್ದು ಯುವಕ ಮೃತಪಟ್ಟಿದ್ದಾನೆ. ಭದ್ರಾವತಿ ಮೂಲದ ಶರತ್ ಕುಮಾರ್ (23) ಮೃತಪಟ್ಟ ಯುವಕ. ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರು ಬಳಿ ಇರುವ ಅರಶಿನಗುಂಡಿ ಜಲಪಾತದಲ್ಲಿ  ಈ ಘಟನೆ ನಡೆದಿದೆ.

ಅರಶಿನಗುಂಡಿ ಜಲಪಾತ ವೀಕ್ಷಣೆಗೆ ಬಂದಿದ್ದಾಗ ಈ ದುರಂತ ನಡೆದಿದ್ದು, ಯುವಕ ಜಲಪಾತದಲ್ಲಿ ಬೀಳುತ್ತಿರುವ ದೃಶ್ಯ ಮತ್ತೊರ್ವ ಯುವಕನ ಮೊಬೈಲ್ ನಲ್ಲಿ ಸೆರೆಯಾಗಿದೆ. ಇನ್ನು ಯುವಕನ ಮೃತದೇಹದ ಪತ್ತೆಗೆ ಅಗ್ನಿಶಾಮಕ ದಳ ಕಾರ್ಯಚರಣೆ ನಡೆಸುತ್ತಿದ್ದು,  ಘಟನಾ ಸ್ಥಳಕ್ಕೆ ಕೊಲ್ಲೂರು ಪಿ.ಎಸ್.ಐ ಜಯಲಕ್ಷ್ಮಿ ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Leave a Reply

Your email address will not be published. Required fields are marked *