ಚಿಕ್ಕಬಳ್ಳಾಪುರ : ರಾಜ್ಯ ಸರ್ಕಾರ ಸುಭದ್ರವಾಗಿದೆ. ಯಾರು ಏನು ಮಾಡಲು ಸಾಧ್ಯವಿಲ್ಲ ಎಂದು ಮಾಜಿ ಸಿಎಂ ವೀರಪ್ಪ ಮೊಯ್ಲಿ ತಿಳಿಸಿದರು.
ಇಂದು ಮಾಧ್ಯಮಗಳ ಜೊತೆ ಮಾತನಾಡಿದ ವೀರಪ್ಪ ಮೊಯ್ಲಿ, ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರವನ್ನು ಯಾರು ಅಲ್ಲಾಡಿಸಲು ಸಾಧ್ಯವಿಲ್ಲ. ಮಾಜಿ ಸಿಎಂ ಕುಮಾರಸ್ವಾಮಿ ಬಲೆ ತುಂಬಾ ತೂತು ಆಗಿದೆ. ತೂತು ಬಿದ್ದ ಬಲೆಯಲ್ಲಿ ಮೀನು ಸಿಗಲ್ಲ ಬಲೆಯೂ ಸಿಗಲ್ಲವೆಂದು ಎಂದು ಕುಟುಕಿದರು.
ಮಣಿಪುರದಲ್ಲಿ ಮಹಿಳೆಯರ ಮೇಲೆ ದೌರ್ಜನ್ಯ ವಿಚಾರ ಕುರಿತು ಪ್ರತಿಕ್ರಿಯಿಸಿದ ವೀರಪ್ಪ ಮೊಯ್ಲಿ, ಮಣಿಪುರದಲ್ಲಿ ಎರಡು ಲಕ್ಷ ಜನ ನಿರಾಶ್ರಿತರ ಕೇಂದ್ರದಲ್ಲಿ ಇದ್ದಾರೆ. ಇದು ದೇಶಕ್ಕೆ ನಾಚಿಕೆ ತರುವ ವಿಚಾರ. ಲೋಕಸಭೆ ಅಧಿವೇಶನದಲ್ಲಿ ಪ್ರಧಾನಿ ಮೋದಿ ಸಮರ್ಪಕ ಉತ್ತರ ಕೊಟ್ಟಿಲ್ಲ. ಸಮರ್ಪಕ ಚರ್ಚೆಗೂ ಅವಕಾಶ ಕೊಟ್ಟಿಲ್ಲ. ಮಣಿಪುರದ ವಿಚಾರದಲ್ಲಿ ಅಲ್ಲಿಯ ರಾಜ್ಯ ಸರ್ಕಾರ ಹಾಗೂ ಕೇಂದ್ರ ಸರ್ಕಾರ ವೈಪಲ್ಯವಾಗಿದೆ. ಪ್ರಧಾನಿ ನರೇಂದ್ರ ಮೋದಿಯವರ ನಡೆಯಿಂದಲೆ ಮಣಿಪುರದಲ್ಲಿ ಬೆಂಕಿ ಉರಿಯುತ್ತಿದೆ ಎಂದು ವಾಗ್ದಾಳಿ ನಡೆಸಿದರು.