ಬೆಂಗಳೂರು: ರಾಜರಾಜೇಶ್ವರಿನಗರ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನ ಅವರು ನನಗೆ ಕೊಲೆ ಬೆದರಿಕೆ ಹಾಕಿದ್ದಾರೆ. ರೇಣುಕಾಸ್ವಾಮಿಗೆ ಆದ ಗತಿ ನಿನಗೂ ಆಗಲಿದೆ ಎಂಬುದಾಗಿ ಕೊಲೆ ಬೆದರಿಕೆ ಹಾಕಿದ್ದಾರೆ ಎಂಬುದಾಗಿ ಗುತ್ತಿಗೆದಾರರೊಬ್ಬರು ಪೊಲೀಸರಿಗೆ ದೂರು ನೀಡಿದ್ದಾರೆ.
ಈ ಸಂಬಂಧ ಇಂದು ಬೆಂಗಳೂರು ನಗರ ಪೊಲೀಸ್ ಆಯುಕ್ತರಾದಂತ ಬಿ.ದಯಾನಂದ ಅವರನ್ನು ಭೇಟಿಯಾಗಿ ಬಿಬಿಎಂಪಿ ಗುತ್ತಿಗೆದಾರ ಚಲುವರಾಜು ಅವರು ದೂರು ನೀಡಿದ್ದಾರೆ.
ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ದೂರು ಸಲ್ಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಗುತ್ತಿಗೆಯಲ್ಲಿ ಕಮೀಷನ್ ಕೇಳಿದ್ದಾರೆ. ನಾನು ನನ್ನ ಬಳಿಯಲ್ಲಿ 1 ಲಕ್ಷವಿದೆ ತಗೊಳ್ಳಿ ಅಂತ ಕೊಡೋಕೆ ಹೋದ್ರೆ ಎಲ್ಲಾ ಒಟ್ಟಿಗೆ ಕೊಡು ಅಂತ ಅವಾಜ್ ಹಾಕಿದರು ಎಂದರು.
ನನಗೆ ಶಾಸಕ ಮುನಿರತ್ನ ಬೆದರಿಕೆ ಹಾಕಿದ್ದಾರೆ. 20 ಲಕ್ಷ ಹಣ ನೀಡುವಂತೆ ಬೆದರಿಕೆ ಹಾಕಿದ್ದಾರೆ. ಹಣ ಕೊಡದೇ ಇದ್ದರೇ ರೇಣುಕಾಸ್ವಾಮಿಗೆ ಆದಂತ ಗತಿಯೇ ನಿನಗೆ ಆಗಲಿದೆ ಎಂಬುದಾಗಿ ಬೆದರಿಸಿದ್ದಾರೆ. ರೇಣುಕಾಸ್ವಾಮಿ ಕೊಲೆ ಮಾಡಿದ್ದೇ ನನ್ನ ಅಕ್ಕನ ಮಗ ಎಂಬುದಾಗಿಯೂ ಎಚ್ಚರಿಸಿದ್ದಾರೆ ಎಂಬುದಾಗಿ ಗಂಭೀರ ಆರೋಪ ಮಾಡಿದರು.
ಇದೇ ಸಂದರ್ಭದಲ್ಲಿ ಗುತ್ತಿಗೆದಾರ ಚಲುವರಾಜು ಹಾಗೂ ಶಾಸಕ ಮುನಿರತ್ನ ಮಾತನಾಡಿರುವಂತ ಆಡಿಯೋವನ್ನು ಬಿಡುಗಡೆ ಮಾಡಿದರು. ಈಗ ಆಡಿಯೋ ವೈರಲ್ ಆಗಿದೆ.