ತೀರ್ಥಹಳ್ಳಿ: ಪಟ್ಟಣ ಪಂಚಾಯಿತಿ ಇತ್ತೀಚಿನ ದಿನಗಳಲ್ಲಿ ಸಂಪೂರ್ಣವಾಗಿ ಮೂಲಭೂತ ಸೌಕರ್ಯ ಒದಗಿಸುವಲ್ಲಿ ವಿಫಲವಾಗುತ್ತಿದೆ.
ಪಟ್ಟಣದ ಹೃದಯ ಭಾಗದಲ್ಲಿರುವ ಆಗುಂಬೆ ಬಸ್ ನಿಲ್ದಾಣದ ಬಳಿ ಸಾರ್ವಜನಿಕ ಶೌಚಾಲಯ ಕಳೆದ ಹದಿನೈದು ದಿನಗಳಿಂದ ಬಾಗಿಲಿಗೆ ಬೀಗ ಹಾಕಿದ್ದು, ಬಸ್ ಪ್ರಯಾಣಿಕರಿಗೆ ಹಾಗೂ ಸಾರ್ವಜನಿಕರಿಗೆ, ಶೌಚಾಲಯವಿಲ್ಲದೆ ಮೂತ್ರ ವಿಸರ್ಜನೆಗೂ ಸಮಸ್ಯೆಯಾಗಿದೆ.
ಈ ಬಗ್ಗೆ ಅಲ್ಲಿಯ ಸ್ಥಳೀಯ ಆಟೋ ನಿಲ್ದಾಣದವರು ಸಂಬಂಧಪಟ್ಟ ಪಟ್ಟಣ ಪಂಚಾಯತ್ ಆಡಳಿತದ ಗಮನಕ್ಕೆ ತಂದರೂ ಈವರೆಗೂ ಇಲ್ಲಿರುವ ಸಾರ್ವಜನಿಕ ಶೌಚಾಲಯದ ಬೀಗ ಮಾತ್ರ ತೆಗೆದಿಲ್ಲ.
ನಿರಂತರವಾಗಿ ಮಳೆ ಸುರಿಯುತ್ತಿದ್ದು ಶೌಚಾಲಯ ಇಲ್ಲದೆ ಮಹಿಳಾ ಪ್ರಯಾಣಿಕರಿಗೆ ಸಮಸ್ಯೆಯಾಗುತ್ತಿದ್ದು ಈ ಬಗೆ ತಕ್ಷಣ ಪಟ್ಟಣ ಪಂಚಾಯಿತಿ ಅಧಿಕಾರಿಗಳು ಗಮನಹರಿಸಿ ಸಾರ್ವಜನಿಕರಿಗೆ ತೊಂದರೆ ಆಗದಂತೆ ಈ ಸಾರ್ವಜನಿಕ ಶೌಚಾಲಯ ವ್ಯವಸ್ಥೆಯನ್ನು ಕಲ್ಪಿಸಬೇಕೆಂದು ಸ್ಥಳೀಯರ ಆಗ್ರಹ.