Trending

ನಕ್ಸಲ್ ನಾಯಕ ಬಿ.ಜಿ. ಕೃಷ್ಣಮೂರ್ತಿ ಶಿವಮೊಗ್ಗಕ್ಕೆ ; ಬಿಗಿ ಭದ್ರತೆ

Spread the love

ಶಿವಮೊಗ್ಗ: ನಕ್ಸಲ್ ನಾಯಕ ಬಿ.ಜಿ. ಕೃಷ್ಣಮೂರ್ತಿಯನ್ನು ಬಾಡಿ ವಾರಂಟ್ ಮೂಲಕ ಕೇರಳದ ತ್ರಿಶೂರ್ ಜಿಲ್ಲೆಯ ವಿಯೂರ್ ಜೈಲಿನಿಂದ ಶಿವಮೊಗ್ಗಕ್ಕೆ ಕರೆತರಲಾಗುತ್ತಿದೆ.

ಮಾವೋವಾದಿ ನಕ್ಸಲರ ಪ್ರಮುಖ ನಾಯಕನಾಗಿರುವ ಬಿ.ಜಿ.ಕೃಷ್ಣಮೂರ್ತಿಯನ್ನು ಶಿವಮೊಗ್ಗದ ಕೋರ್ಟ್ ಗೆ ಹಾಜರು ಪಡಿಸಲು ಪೊಲೀಸರು ಕರೆತರುತ್ತಿದ್ದು, ಬುಧವಾರ ಬೆಳಗ್ಗೆ 10 ಗಂಟೆಗೆ ಶಿವಮೊಗ್ಗ ಜಿಲ್ಲಾ ಸತ್ರ ನ್ಯಾಯಾಲಯದ ಮುಂದೆ ಹಾಜರು ಪಡಿಸಲಿದ್ದಾರೆ.

ತೀರ್ಥಹಳ್ಳಿ ಠಾಣೆಯ 2 , ಆಗುಂಬೆ ಠಾಣೆಯ 3 ಪ್ರಕರಣಗಳಲ್ಲಿ ಪ್ರಮುಖ ಆರೋಪಿಯಾಗಿರುವ ಬಿ.ಜಿ.ಕೃಷ್ಣಮೂರ್ತಿ ಚಿಕ್ಕಮಗಳೂರು ಜಿಲ್ಲೆಯ ನೆಮ್ಮಾರು ಬುಕ್ಕಡಿಬೈಲ್ ಗ್ರಾಮದವನು.ಭಾರೀ ಭದ್ರತೆಯ ಮೂಲಕ ಮೂಲಕ ಕೇರಳದಿಂದ ಶಿವಮೊಗ್ಗಕ್ಕೆ ಕರೆತರಲಾಗುತ್ತಿದ್ದು, ಮಂಗಳವಾರ ರಾತ್ರಿ ವೇಳೆಗೆ ಶಿವಮೊಗ್ಗದ ಜೈಲಿಗೆ ತಲುಪಲಿದ್ದಾರೆ ಎಂದು ವರದಿಯಾಗಿದೆ.

ಸಾಕೇತ್ ರಾಜನ್ ಬಳಿಕ ನಕ್ಸಲ್ ನಾಯಕನಾಗಿ ಗುರುತಿಸಿಕೊಂಡಿದ್ದ ಬಿ.ಜಿ.ಕೃಷ್ಣಮೂರ್ತಿಯನ್ನು 2021ರ ನವೆಂಬರ್‌ನಲ್ಲಿ ಕೇರಳ ಪೊಲೀಸರು ಬಂಧಿಸಿದ್ದರು.

[pj-news-ticker]