ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಆ್ಯಂಡ್ ಗ್ಯಾಂಗ್‌ನ ನ್ಯಾಯಾಂಗ ಬಂಧನ ಅವಧಿ ವಿಸ್ತರಿಸಿ 24ನೇ ಎಸಿಎಂಎಂ ನ್ಯಾಯಾಲಯ ಆದೇಶಿಸಿದೆ.
ಬಳ್ಳಾರಿ ಜೈಲಿನಿಂದ ವಿಚಾರಣೆಗೆ ದರ್ಶನ್ ಪರಪ್ಪನ ಅಗ್ರಹಾರದಿಂದ ಪವಿತ್ರಾ ಗೌಡ ವಿಚಾರಣೆಗೆ ಹಾಜರಾಗಿದ್ದರು.
ಮಂಗಳವಾರ ಪ್ರಕರಣ ಸಂಬಂಧ ವಿಚಾರಣೆ ನಡೆಸಿ ಬೆಂಗಳೂರಿನ 24ನೇ ಎಸಿಎಂಎಂ ನ್ಯಾಯಾಲಯ ಸೆ.30ರವರೆಗೆ ಆರೋಪಿಗಳ ನ್ಯಾಯಾಂಗ ಬಂಧನದ ಅವಧಿಯನ್ನು ವಿಸ್ತರಿಸಿ ಆದೇಶ ನೀಡಿದೆ.
ಬೆನ್ನು ನೋವೆಂದು ಚೇರ್ ಕೇಳಿದರೂ ಕೊಟ್ಟಿಲ್ಲ, ಸ್ನೇಹಿತರ ಭೇಟಿಗೆ ಅವಕಾಶ ನೀಡುತ್ತಿಲ್ಲ ಎಂದು ಕೋರ್ಟ್‌ಗೆ ದರ್ಶನ್ ಪರ ವಕೀಲರು ಹೇಳಿದ್ದಾರೆ. ಇದಕ್ಕೆ ನ್ಯಾಯಾಧೀಶರು ಅಗತ್ಯ ಸೌಲಭ್ಯವನ್ನು ನೀಡುವಂತೆ ಜೈಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.
ಬಳ್ಳಾರಿ ಜೈಲಿನಿಂದ ದರ್ಶನ್, ಪರಪ್ಪನ ಅಗ್ರಹಾರ ಜೈಲಿನಿಂದ ಪವಿತ್ರಾ ಗೌಡ, ದೀಪಕ್, ತುಮಕೂರು ಜೈಲಿನಿಂದ ಅನುಕುಮಾರ್, ಜಗದೀಶ್ ಹಾಗೂ ರವಿ ಸೇರಿ ರಾಜ್ಯದ ವಿವಿಧ ಕಾರಾಗೃಹದಲ್ಲಿರುವ 17 ಮಂದಿ ಆರೋಪಿಗಳು ವಿಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಲಯದ ಮುಂದೆ ಹಾಜರಾಗಿದ್ದರು.
ಈಗಾಗಲೇ ಪೊಲೀಸರು ಪ್ರಕರಣ ಆರೋಪಪಟ್ಟಿಯನ್ನು ಸಲ್ಲಿಸಿದ್ದಾರೆ. 3,991 ಪುಟಗಳ ಆರೋಪಪಟ್ಟಿಯನ್ನು ಸಲ್ಲಿಸಿದ್ದಾರೆ.