Spread the love

ಚೆನ್ನೈ: ಶಾಲೆಗೆ ತೆರಳುತಿದ್ದ ವಿದ್ಯಾರ್ಥಿಗಳಿಗೆ ಕಾರು ಢಿಕ್ಕಿ ಹೊಡೆದು ಮೂವರು ಸ್ಥಳದಲ್ಲೇ ಸಾವನಪ್ಪಿರುವ ಘಟನೆ ತಿರುಪತ್ತೂರ್ ನ ವಾಣಿಯಂಪಾಡಿನಲ್ಲಿ ಮಂಗಳವಾರ ಮುಂಜಾನೆ ನಡೆದಿದೆ.

ಮಂಗಳವಾರ ಮುಂಜಾನೆ ಚೆನ್ನೈ-ಬೆಂಗಳೂರು ಹೆದ್ದಾರಿಯಲ್ಲಿ ಸೈಕಲ್‌ ನಲ್ಲಿ ವಿದ್ಯಾರ್ಥಿಗಳು ಗುಂಪೊಂದು ಗಿರಿಸಮುಥಿರಂನಲ್ಲಿರುವ ಸರ್ಕಾರಿ ಶಾಲೆಗೆ ಹೋಗುತ್ತಿದ್ದರು. ಈ ವೇಳೆ ವೆಲ್ಲೂರಿನಿಂದ ಬೆಂಗಳೂರಿಗೆ ಕಡೆ ಹೋಗುತ್ತಿದ್ದ ಕಾರು ವೇಗವಾಗಿ ಬಂದು ವಿದ್ಯಾರ್ಥಿಗಳಿಗೆ ಢಿಕ್ಕಿ ಹೊಡೆದು, ಮರಕ್ಕೆ ಗುದ್ದಿದೆ. ಪರಿಣಾಮ ಮೂವರು ವಿದ್ಯಾರ್ಥಿಗಳು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಚಾಲಕನ ನಿಯಂತ್ರಣ ತಪ್ಪಿದ ಕಾರಣ ಈ ಅಪಘಾತ ಸಂಭವಿಸಿದೆ ಎನ್ನಲಾಗಿದ್ದು, ಘಟನೆಯಲ್ಲಿ 7ನೇ ತರಗತಿಯಲ್ಲಿ ಓದುತ್ತಿದ್ದ ವಿಜಯ್(13), ರಫೀಕ್(13) ಮತ್ತು ಸೂರ್ಯ(13) ಎನ್ನುವ ವಿದ್ಯಾರ್ಥಿಗಳು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.

ಘಟನಾ ಸ್ಥಳದಲ್ಲಿ ಸಾರ್ವಜನಿಕರು ಜಮಾಯಿಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ವಿಚಾರಣೆ ನಡೆಸುತ್ತಿದ್ದಾರೆ.

Leave a Reply

Your email address will not be published. Required fields are marked *