Breaking
Tue. Oct 8th, 2024

ಬೆಂಗಳೂರಿನ ಎಂ.ಎಸ್ ರಾಮಯ್ಯ ಆಸ್ಪತ್ರೆಯಲ್ಲಿ ಅಗ್ನಿ ಅವಘಡ : ತಪ್ಪಿದ ಭಾರಿ ಅನಾಹುತ!

By Mooka Nayaka News Sep 19, 2024
Spread the love

ಬೆಂಗಳೂರು : ಬೆಂಗಳೂರಿನ ಪ್ರತಿಷ್ಠಿತ ಆಸ್ಪತ್ರೆಯಾದ ಎಂ ಎಸ್ ರಾಮಯ್ಯ ಆಸ್ಪತ್ರೆಯಲ್ಲಿ ಮೂರನೇ ಮಹಡಿಯಲ್ಲಿ ಅಗ್ನಿ ಅನಾಹುತ ಸಂಭವಿಸಿದೆ.

ಇಂದು ಮದ್ಯಾಹ್ನ 1 ಗಂಟೆ ಸುಮಾರಿಗೆ ಎಂ ಎಸ್ ರಾಮಯ್ಯ ಆಸ್ಪತ್ರೆಯ ಮೂರನೇ ಮಹಡಿಯಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಬೆಂಕಿ ನಂದಿಸಲು ಇದೀಗ ಅಗ್ನಿಶಾಮಕ ಸಿಬ್ಬಂದಿ ಹರಸಾಹಸ ಪಡುತ್ತಿದ್ದಾರೆ. ರೋಗಿಗಳನ್ನು ಆಸ್ಪತ್ರೆಯ ಸಿಬ್ಬಂದಿಗಳು ಹೊರಗಡೆ ಕಳುಹಿಸುವ ವ್ಯವಸ್ಥೆ ಮಾಡಿದ್ದಾರೆ.

ಕಾರ್ಡಿಯಾಕ್ ಐಸಿ ವಾರ್ಡ್ ನ ACಯಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಕಾಣಿಸಿಕೊಂಡಿದೆ. ನರ್ಸ್ಗಳ ಸಮಯ ಪ್ರಜ್ಞೆಯಿಂದ ಸುಮಾರು 7 ರೋಗಿಗಳು ಪಾರು ಮಾಡಿದ್ದಾರೆ. ಈ ವೇಳೆ ನರ್ಸ್ ಗಳಿಗೆ ಸಣ್ಣಪುಟ್ಟ ಗಾಯಗಳಾಗಿರುವ ಘಟನೆ ನಡೆದಿದೆ.

 

Related Post