ತಿರುಪತಿ: ಆಂಧ್ರಪ್ರದೇಶದ ಜಗತ್ಪಸಿದ್ಧ ಧಾರ್ಮಿಕ ಪುಣ್ಯಕ್ಷೇತ್ರ ತಿರುಪತಿ ದೇಗುಲದಲ್ಲಿ ಭಕ್ತರಿಗೆ ಪ್ರಸಾದವಾಗಿ ನೀಡುವ ಪವಿತ್ರ ಲಡ್ದುಗಳಲ್ಲಿ ಪ್ರಾಣಿಗಳ ಕೊಬ್ಬು ಮತ್ತು ಮೀನಿನ ಎಣ್ಣೆ ಇರುವುದನ್ನು ಲ್ಯಾಬ್ ವರದಿ ದೃಢಪಡಿಸಿದೆ.
ಹಿಂದಿನ ವೈಎಸ್‌ಆರ್ ಕಾಂಗ್ರೆಸ್ ಸರಕಾರ ತಿರುಪತಿ ಲಡ್ದು ತಯಾರಿಕೆಯಲ್ಲಿ ಪ್ರಾಣಿಗಳ ಕೊಬ್ಬು ಮತ್ತು ಗುಣಮಟ್ಟವಿಲ್ಲದ ಪದಾರ್ಥಗಳನ್ನು ಬಳಸಿತ್ತು ಎಂದು ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಆರೋಪಿಸಿದ ಬೆನ್ನಲ್ಲೇ ಲ್ಯಾಬ್ ವರದಿ ದೃಢಪಟ್ಟಿದೆ. ಜಗನ್ ಮೋಹನ್ ರೆಡ್ಡಿ ನೇತೃತ್ವದ ವೈಎಸ್‌ಆರ್‌ಸಿ ಪಕ್ಷ ಆರೋಪವನ್ನು ನಿರಾಕರಿಸಿದೆ.
ಈಗ, ಪಶು ಆಹಾರ ಮತ್ತು ಹಾಲು ಮತ್ತು ಹಾಲಿನ ಉತ್ಪನ್ನಗಳನ್ನು ಪರೀಕ್ಷಿಸುವ ಖಾಸಗಿ ಪ್ರಯೋಗಾಲಯದ NDDB CALF ನ ವರದಿಯು ತಿರುಪತಿ ಲಡ್ದುಗಳನ್ನು ತಯಾರಿಸಲು ಬಳಸುವ ತುಪ್ಪದ ಮಾದರಿಗಳಲ್ಲಿ ತಾಳೆ ಎಣ್ಣೆ, ಮೀನಿನ ಎಣ್ಣೆ, ಬೀಫ್ ಟ್ಯಾಲೋ, ಹಂದಿಯ ಕೊಬ್ಬಿನ ಅಂಶ ಸೇರಿರುವುದನ್ನು ಬಹಿರಂಗಪಡಿಸಿದೆ.
ಚಂದ್ರಬಾಬು ನಾಯ್ಡು ಅವರ ಗಂಭೀರ ಆರೋಪದ ನಂತರ, ಆಂಧ್ರಪ್ರದೇಶದ ಐಟಿ ಸಚಿವ ನಾರಾ ಲೋಕೇಶ್ ಕೂಡ ಈ ವಿಷಯದ ಬಗ್ಗೆ ಜಗನ್ ಮೋಹನ್ ರೆಡ್ಡಿ ಅವರನ್ನು ಗುರಿಯಾಗಿಸಿದ್ದಾರೆ.
ಸಾಮಾಜಿಕ ತಾಣಗಳಲ್ಲೂ ವ್ಯಾಪಕ ಆಕ್ರೋಶ
ಲ್ಯಾಬ್ ವರದಿ ಧೃಡವಾಗುತ್ತಿದ್ದಂತೆ ಸಾಮಾಜಿಕ ತಾಣಗಳಲ್ಲೂ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದ್ದು ಕೋಟ್ಯಂತರ ಜನರ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿರುವ ವಿರುದ್ಧ ಜನರು ಕಿಡಿ ಕಾರುತ್ತಿದ್ದಾರೆ.