Spread the love

ಸಾಗರ: ತಾಲೂಕಿನ ಎಡಜಿಗಳೇಮನೆ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಬಲಿಕೇವಿ ಗ್ರಾಮದ ಶರತ್(26) ಎಂಬ ಯುವಕ ಜೀವನದಲ್ಲಿ ಜಿಗುಪ್ಸೆಗೊಳಗಾಗಿ ವಿಷ ಸೇವಿಸಿ ಸಾವನ್ನಪ್ಪಿದ ಘಟನೆ ನಡೆದಿದೆ.

ಮದ್ಯವ್ಯಸನಿಯಾಗಿದ್ದ ಶರತ್ ಕೂಲಿ ಕೆಲಸ ಮಾಡಿಕೊಂಡಿದ್ದ. ಇತ್ತೀಚೆಗೆ ಮನೆಯಲ್ಲಿನ ನಡೆದ ಗಲಾಟೆಯ ಹಿನ್ನೆಲೆಯಲ್ಲಿ ಸಿಟ್ಟುಗೊಂಡು ಕೊಟ್ಟಿಗೆಗೆ ಬೆಂಕಿ ಹಚ್ಚಿದ್ದವನ ಕುರಿತು ಪೋಷಕರು ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದರು. ಈ ಹಂತದಲ್ಲಿ ಪೊಲೀಸರು ಶರತ್‌ಗೆ ಬರಲು ತಿಳಿಸಿದ್ದಾರೆ.

ಜುಲೈ 23ರಂದು ತಂದೆತಾಯಿಯರ ಜೊತೆ ಬಂದ ಶರತ್, ಮಾನಸಿಕ ವ್ಯಥೆಗೊಳಗಾಗಿ ಜೇಬಿನಿಂದ ಕೀಟನಾಶಕ ತೆಗೆದು ಸೇವಿಸಿದ್ದಾನೆ. ತಕ್ಷಣ ಪೊಲೀಸರು ಆತನನ್ನು ನಗರದ ಉಪವಿಭಾಗೀಯ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ರವಾನಿಸಲಾಗಿದೆ.

ಆದರೆ ವೈದ್ಯರ ಚಿಕಿತ್ಸೆ ಫಲಕಾರಿಯಾಗದೆ ಶರತ್ ಶುಕ್ರವಾರ ರಾತ್ರಿ ಕೊನೆಯುಸಿರೆಳೆದಿದ್ದಾರೆ. ಈ ಕಾರಣ ಮೃತನ ತಂದೆ ಮಂಜಪ್ಪ ನಗರ ಪೊಲೀಸ್ ಠಾಣೆಯಲ್ಲಿ ಅಸಹಜ ಸಾವಿನ ದೂರು ದಾಖಲಿಸಿದ್ದಾರೆ.

 

Leave a Reply

Your email address will not be published. Required fields are marked *