ದಾವಣಗೆರೆ : ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ನಡೆದ ಗಲಭೆ ಘಟನೆ ಮಾಸುವ ಮುನ್ನವೇ ಇದೀಗ ದಾವಣಗೆರೆಯಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲುತೂರಾಟ ನಡೆದಿದೆ. ಬೇತೂರು ರಸ್ತೆಯ ಗಣೇಶ ವಿಸರ್ಜನೆ ವೇಳೆ ಕಲ್ಲುತೂರಾಟ ಘಟನೆ ನಡೆದಿದೆ.
ಘಟನೆಯಲ್ಲಿ ಇಬ್ಬರು ಪೊಲೀಸ್ ಸಿಬ್ಬಂದಿಗೆ ಸಣ್ಣಪುಟ್ಟ ಗಾಯಗಳಾಗಿದೆ ಎಂದು ತಿಳಿದುಬಂದಿದೆ. ದಾವಣಗೆರೆ ನಗರದ ಶಾಂತಿ ಟಾಕೀಸ್ ರಸ್ತೆಯಲ್ಲಿ ಈ ಒಂದು ಕಲ್ಲುತೂರಾಟ ಘಟನೆ ನಡೆದಿದೆ. ಕಲ್ಲು ತೂರಿದ ಕಿಡಿಗೇಡಿಗಳನ್ನು ಪೋಲಿಸ್ ಸಿಬ್ಬಂದಿ ಓಡಿಸಿದ್ದಾರೆ. ಘಟನಾ ಸ್ಥಳದಲ್ಲಿ ಇದೀಗ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಎಸ್ ಪಿ ಉಮಾ ಪ್ರಶಾಂತ್ ನೇತೃತ್ವದಲ್ಲಿ ಬಿಗಿ ಪೊಲೀಸ್ ಭದ್ರತೆ ಒದಗಿಸಲಾಗಿದೆ.