Breaking
Tue. Oct 8th, 2024

ಶಾಲೆಗಳಿಗೆ ದಸರಾ ರಜೆ ಘೋಷಣೆ; ಎಂದಿನಿಂದ ರಜೆ? ಎಷ್ಟು ದಿನ?

By Mooka Nayaka News Sep 20, 2024
Spread the love

ಬೆಂಗಳೂರು : ನಾಡ ಹಬ್ಬ ದಸರಾ ಹಬ್ಬಕ್ಕೆ ಮೈಸೂರಿನಲ್ಲಿ ಅದ್ಧೂರಿ ಸಿದ್ದತೆಗಳು ನಡೆದಿವೆ. ಇನ್ನೊಂದೆಡೆ ಕರ್ನಾಟಕ ಸಾರ್ವಜನಿಕ ಶಿಕ್ಷಣ ಇಲಾಖೆ ಶಾಲಾ ಮಕ್ಕಳಿಗೆ ಅಕ್ಟೋಬರ್ 3 ರಿಂದ 20 ತನಕ ದಸರಾ ರಜೆ ಘೋಷಿಸಿದ್ದು, ಇಡೀ ಕರ್ನಾಟಕದ ಶಾಲೆಗಳಿಗೆ ಒಂದೇ ಮಾರ್ಗದರ್ಶಿ ರೂಪಿಸಿದೆ.

ಈ ಹಿಂದೆ ಕರಾವಳಿ ಭಾಗದಲ್ಲಿ ದಸರಾ ರಜೆಯಲ್ಲಿ ಕೊಂಚ ಮಾರ್ಪಾಡು ಆಗುತ್ತಿತ್ತು. ಆದ್ರೆ, ಈ ಬಾರಿ ಯಾವುದೇ ಮಾರ್ಪಾಡು ಆಗಿಲ್ಲ. ಇಡೀ ಕರ್ನಾಟಕದ ಎಲ್ಲಾ ಶಾಲೆಗಳಿಗೆ ಒಂದೇ ಮಾರ್ಗದರ್ಶಿ ರೂಪಿಸಲಾಗಿದೆ.

ಅಕ್ಟೋಬರ್ 3 ರಿಂದ 20ರ ತನಕ ಅಂದರೆ 17 ದಿನಗಳ ಕಾಲ ದಸರಾ ರಜೆ ಸಿಗಲಿದೆ. ಅಕ್ಟೋಬರ್ 21ರಿಂದ 2ನೇ ಅವಧಿಯು ಪ್ರಾರಂಭವಾಗಲಿದ್ದು, 2025ರ ಏಪ್ರಿಲ್ 10 ತನಕ ನಡೆಯಲಿದೆ. 2024-2025ರ ಶೈಕ್ಷಣಿಕ ವರ್ಷದ ಶಾಲಾ ಅವಧಿಯ ಮಾರ್ಗದರ್ಶಿಯನ್ನು ಸಾರ್ವಜನಿಕ ಶಿಕ್ಷಣ ಇಲಾಖೆ, ಶಾಲೆಗಳು ಆರಂಭಕ್ಕೂ ಮುನ್ನ ಪ್ರಕಟಣೆ ಹೊರಡಿಸಿತ್ತು. ಅದರ ನಿಯಮಾನುಸಾರದಂತೆ ರಜೆಗಳು ಘೋಷಣೆಯಾಗಿವೆ. ಈಗ ದಸರಾ ರಜೆ ಹಿನ್ನೆಲೆಯಲ್ಲಿ ಅಕ್ಟೋಬರ್ ತಿಂಗಳಲ್ಲಿ ಕೇವಲ 11 ದಿನಗಳು ತರಗತಿಗಳು ನಡೆಯಲಿವೆ.

ಮತ್ತೊಂದೆಡೆ, ದೀಪಾವಳಿ ಅಕ್ಟೋಬರ್ 31 ರಂದು ಬರುವುದರಿಂದ, ಆ ದಿನ ರಾಜ್ಯದ ಎಲ್ಲಾ ಶಾಲಾ-ಕಾಲೇಜುಗಳಿಗೆ ರಜೆ ಇರಲಿದೆ. ಒಟ್ಟಿನಲ್ಲಿ ಅಕ್ಟೋಬರ್ ತಿಂಗಳಲ್ಲಿ 13 ದಿನ ರಜೆ ಇರುವ ಸಾಧ್ಯತೆ ಇದೆ. ಡಿಸೆಂಬರ್ 22 ರಿಂದ 29 ರವರೆಗೆ ಕ್ರಿಸ್ಮಸ್ ರಜೆ ನೀಡಲಾಗುತ್ತದೆ.

Related Post