Breaking
Tue. Oct 8th, 2024

ಹೃದಯಾಘಾತದಿಂದ 11 ವರ್ಷದ ಬಾಲಕ ಸಾವು!

By Mooka Nayaka News Sep 21, 2024
Spread the love

ಹಾಸನ : 11 ವರ್ಷದ ಬಾಲಕ ಹೃದಯಘಾತದಿಂದ ಮೃತಪಟ್ಟ ಘಟನೆ ಹಾಸನ ಜಿಲ್ಲೆಯ ಆಲೂರು ತಾಲ್ಲೂಕಿನ ಚನ್ನಾಪುರ ಗ್ರಾಮದಲ್ಲಿ ನಡೆದಿದೆ. ಮೃತಪಟ್ಟ ಬಾಲಕನನ್ನು ಸಚಿನ್ ಎಂದು ಗುರುತಿಸಲಾಗಿದೆ.

ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಎಂಟನೇ ತರಗತಿ ಓದುತ್ತಿದ್ದ ಸಚಿನ್, ಮನೆಯಲ್ಲಿ ಟಿವಿ ನೋಡುತ್ತಿದ್ದ ವೇಳೆ ಹೃದಯಾಘಾತವಾಗಿದೆ. ಇದ್ದಲ್ಲಿಯೇ ಸಚಿನ್ ಕೊನೆಯುಸಿರೆಳೆದಿದ್ದಾರೆ. ನಿನ್ನೆ ಘಟನೆ ನಡೆದಿದೆ. ಇದ್ದಕ್ಕಿದ್ದಂತೆ ಎದೆನೋವು ಕಾಣಿಸಿಕೊಂಡಿದೆ. ಟಿವಿ ನೋಡುತ್ತಲೇ ಕುಸಿದು ಬಿದ್ದ ಮಗನನ್ನು ಮಾತನಾಡಿಸಲು ಮನೆಯವರು ಪ್ರಯತ್ನಿಸಿದ್ದು, ಏನು ಮಾತನಾಡದೆ ಇರೋದನ್ನು ಗಮನಿಸಿ ಪೋಷಕರು ಕೂಡಲೇ ಆಸ್ಪತ್ರೆಗೆ ದಾಖಲಿಸುವ ಕೆಲಸ ಮಾಡಿದ್ದಾರೆ. ಆದರೆ ತಾಲೂಕು ಸರ್ಕಾರಿ ಆಸ್ಪತ್ರೆಗೆ ಕರೆತರುವ ಮುನ್ನವೇ ಬಾಲಕ ಸಾವನ್ನಪ್ಪಿದ್ದ ಎಂದು ವೈದ್ಯರು ಪೋಷಕರು ತಿಳಿಸಿದ್ದಾರೆ.

ಚಿಕ್ಕವಯಸ್ಸಿನಲ್ಲೇ ಬಾಲಕ ಹೃದಯಾಘಾತಕ್ಕೆ ಬಲಿಯಾಗಿರುವುದು, ಸಾರ್ವಜನಿಕ ವಲಯದಲ್ಲಿ ಆತಂಕ ಮನೆ ಮಾಡುವಂತೆ ಮಾಡಿದೆ. ಮಗನನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲುಮುಟ್ಟಿದೆ.

 

Related Post