Breaking
Tue. Oct 8th, 2024

ನ್ಯಾಯಾಲಯದಲ್ಲೆ ಬೇಕಾದರೆ ರಾಜೀನಾಮೆ ಕೊಡುತ್ತೇನೆ – ಈ ತರ ಹಿಂಸೆ ತಡೆದುಕೊಳ್ಳಲು ಆಗಲ್ಲ : ಬಿಜೆಪಿ ಶಾಸಕ ಮುನಿರತ್ನ

By Mooka Nayaka News Sep 21, 2024
Spread the love

ಬೆಂಗಳೂರು: ಅತ್ಯಾಚಾರ ಪ್ರಕರಣದಲ್ಲಿ ಕಗ್ಗಲಿಪುರ ಪೊಲೀಸರಿಂದ ಬಂಧನಕ್ಕೊಳಗಾಗಿರುವ ಬಿಜೆಪಿ ಶಾಸಕ ಮುನಿರತ್ನಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿ ನ್ಯಾಯಾಲಯ ಶನಿವಾರ ಆದೇಶ ನೀಡಿದೆ. ಇದರೊಂದಿಗೆ ಅವರು ಮತ್ತೆ ಜೈಲು ಪಾಲಾಗಿದ್ದಾರೆ.

ಗುತ್ತಿಗೆದಾರನಿಗೆ ಬೆದರಿಕೆ ಹಾಕಿದ ಮತ್ತು ಜಾತಿ ನಿಂದನೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನಕ್ಕೊಳಗಾಗಿ ಜೈಲು ಪಾಲಾಗಿದ್ದ ಅವರು ಗುರುವಾರವಷ್ಟೇ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದರು. ಇದರ ಬೆನ್ನಲ್ಲೇ ಅತ್ಯಾಚಾರ ಪ್ರಕರಣ ಅವರನ್ನು ಸುತ್ತಿಕೊಂಡಿತ್ತು.

ಮುನಿರತ್ನನ್ನು ಪೊಲೀಸರು ಶನಿವಾರ ಕೋರ್ಟ್ಗೆ ಹಾಜರುಪಡಿಸಿದ್ದು, ಅಕ್ಟೋಬರ್ 5ರ ವರೆಗೆ ನ್ಯಾಯಾಂಗ ಬಂಧನ ವಿಧಿಸಿ ಕೋರ್ಟ್ ಆದೇಶ ನೀಡಿದೆ.

ನ್ಯಾಯಾಧೀಶರ ಎದುರು ಮುನಿರತ್ ಅಳಲು

ವಿಚಾರಣೆ ವೇಳೆ ನ್ಯಾಯಾಧೀಶರ ಬಳಿ ಮುನಿರತ್ನ ಅಳಲು ತೋಡಿಕೊಂಡರು. ನನ್ನನ್ನು ಜೈಲಲ್ಲಿ ಇರಿಸಲು ವ್ಯವಸ್ಥಿತವಾದ ಸಂಚು ಹೂಡಲಾಗಿದೆ. ಲೋಕಸಭಾ ಚುನಾವಣೆ ಬಳಿಕ ಇದೆಲ್ಲ ಶುರುವಾಗಿದೆ. ಐದು ವರ್ಷಗಳ ಬಳಿಕ ಅತ್ಯಾಚಾರ ದೂರು ಕೊಡಿಸಿದ್ದಾರೆ. ಆಕೆ ಮೊದಲೇ ಕೊಡಬಹುದಿತ್ತಲ್ಲವೇ? ನನ್ನನ್ನು ಪೂರ್ತಿ ಐದು ವರ್ಷ ಜೈಲಲ್ಲಿ ಇಡಲು ಪ್ಲಾನ್ ಮಾಡಿಸಿದ್ದಾರೆ. ನಾನು ಜನಪ್ರತಿನಿಧಿಯಾದವನು, ನನಗೆ ಜನರ ಬಳಿ ಹೇಗೆ ನಡೆದುಕೊಳ್ಳಬೇಕು ಎಂದು ಗೊತ್ತಿದೆ. ನಾನು ಈ ನ್ಯಾಯಾಲಯದಲ್ಲೆ ಬೇಕಾದರೆ ರಾಜೀನಾಮೆ ಕೊಡುತ್ತೇನೆ. ಆದರೆ ಈ ತರ ಹಿಂಸೆ ತಡೆದುಕೊಳ್ಳಲು ಆಗಲ್ಲ ಎಂದು ಮುನಿರತ್ನ ಅಲವತ್ತುಕೊಂಡರು.

ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಾಧೀಶರು, ನೀವು ಎಲ್ಲಿ ಕೊಡಬೇಕೋ ಅಲ್ಲಿಯೇ ರಾಜೀನಾಮೆ ಕೊಡಿ ಎಂದರು.

 

Related Post