ಮಂಗಳೂರು : ಉಡುಪಿ ಕಾಲೇಜೊಂದರ ಶೌಚಾಲಯದಲ್ಲಿ ಮೊಬೈಲ್ ಚಿತ್ರೀಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಸುಮೋಟೋ ಪ್ರಕರಣವನ್ನು ದಾಖಲಿಸಿಕೊಂಡಿದ್ದು ಎಫ್ ಐಆರ್ ಆಗಿದೆ. ತನಿಖೆಯನ್ನು ಡಿ ವೈಎಸ್ಪಿ ಮಟ್ಟದ ಅಧಿಕಾರಿ ಮಾಡುತ್ತಿದ್ದು, ಪ್ರಕರಣವನ್ನು ಎಸ್.ಐ.ಟಿಗೆ ವಹಿಸುವ ಪ್ರಶ್ನೆ ಉದ್ಬವವಾಗುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಇಂದು ಮಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಸಿದ್ಧರಾಮಯ್ಯ, ಕೇಂದ್ರ ಮಹಿಳಾ ಆಯೋಗದ ಸದಸ್ಯರು ಆಗಮಿಸಿ ತನಿಖೆ ಕೈಗೊಂಡು ಕಾಲೇಜಿನ ಶೌಚಾಲಯದಲ್ಲಿ ಕ್ಯಾಮರಾ ಇರಲಿಲ್ಲ ಎಂದು ಹೇಳಿದ್ದಾರೆ. ತನಿಖೆಯಾಗಿ ವರದಿ ಬಂದ ನಂತರ ಕ್ರಮ ಕೈಗೊಳ್ಳಲಾಗುವುದು ಎಂದರು.
ಡಿವೈಎಸ್ಪಿ ಮಟ್ಟದ ಅಧಿಕಾರಿ ತನಿಖೆ ನಡೆಸುತ್ತಿದ್ದಾರೆ ಎಂದ ಮೇಲೆ ಪ್ರಕರಣವನ್ನು ಎಸ್.ಐ.ಟಿಗೆ ವಹಿಸುವ ಪ್ರಶ್ನೆ ಉದ್ಬವವಾಗುವುದಿಲ್ಲ ಎಂದರು.