ಬೆಂಗಳೂರು : ಇತ್ತೀಚಿಗೆ ಸಾಮಾಜಿಕ ಜಾಲತಾಣಗಳಲ್ಲಿ ವಿವಿಧ ರೀತಿಯಲ್ಲಿ ರಿಲ್ಸ್ ಗಳನ್ನು ನಾವು ನೋಡುತ್ತಿರುತ್ತೇವೆ. ಅದರಲ್ಲೂ ಅತಿ ಹೆಚ್ಚು ಲೈಕ್ಸ್, ಕಮೆಂಟ್ಸ್ ಪಡೆಯೋ ಒಂದು ಆಸೆಗೆ ಬಿದ್ದು, ಎಷ್ಟೋ ಜನರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಇದೀಗ ಬೆಂಗಳೂರಿನ ಮಾರತ ಹಳ್ಳಿಯಲ್ಲಿ ಕೆರೆಯಲ್ಲಿ ರಿಲ್ಸ್ ಮಾಡುವ ಹುಚ್ಚಿಗೆ ಯುವಕನೊಬ್ಬ ನೀರು ಪಾಲಾಗಿರುವ ಘಟನೆ ನಡೆದಿದೆ.
ರೀಲ್ಸ್ ಮಾಡಲು ಕೆರೆಗೆ ಹಾರಿದ ಯುವಕ ನೀರಿನ ರಭಸಕ್ಕೆ ನೀರು ಪಾಲಾಗಿರುವ ಘಟನೆ ಬೆಂಗಳೂರಿನ ಮಾರತಹಳ್ಳಿ ಪಣತ್ತೂರು ಕೆರೆಯಲ್ಲಿ ಈ ಒಂದು ದುರಂತ ಸಂಭವಿಸಿದೆ. ರೀಲ್ಸ್ ಮಾಡುವುದಕ್ಕೆ ಮೂವರು ಸ್ನೇಹಿತರು ಕೆರೆಯ ಬಳಿ ಆಗಮಿಸಿದ್ದರು.
ಈ ವೇಳೆ ಇಬ್ಬರು ಕೆರೆಯಲ್ಲಿ ಈಜಾಡುತ್ತಿದ್ದರು. ಓರ್ವ ಸ್ನೇಹಿತ ವಿಡಿಯೋ ಮಾಡುತ್ತಿದ್ದ. ಈಜಾಡುತ್ತಿದ್ದ ಇಬ್ಬರ ಪೈಕಿ ಓರ್ವ ಯುವಕ ನೀರು ಪಾಲಾಗಿದ್ದಾನೆ. ಸದ್ಯ ಘಟನಾ ಸ್ಥಳಕ್ಕೆ ಪೊಲೀಸರು, ಅಗ್ನಿಶಾಮಕ ದಳ ಸಿಬ್ಬಂದಿ ಆಗಮಿಸಿದ್ದು, ಯುವಕನ ಮೃತದೇಹಕ್ಕಾಗಿ ಶೋಧ ಕಾರ್ಯ ಮುಂದುವರಿಸಿದ್ದಾರೆ.