ಶಿವಮೊಗ್ಗ: ಮಲೆನಾಡಿನಲ್ಲಿ ಕಾಡಾನೆಗಳ ಹಾವಳಿ ಮುಂದುವರೆದಿದ್ದು ಭಾನುವಾರ ತಡರಾತ್ರಿ ಎರಡು ಕಾಡಾನೆಗಳು ದಾಳಿ ನಡೆಸಿ ರೈತರ ಬೆಳೆಗಳನ್ನು ಸಂಪೂರ್ಣ ನಾಶ ಮಾಡಿರುವ ಘಟನೆ ಶಿವಮೊಗ್ಗ ತಾಲೂಕಿನ ಪುರದಾಳು ಗ್ರಾಮದಲ್ಲಿ ನಡೆದಿದೆ.
ಪುರದಾಳು ಗ್ರಾಮದ ರಾಜೇಶ್ ಹಾಗೂ ಬೀರಪ್ಪ, ನಾಗರಾಜ್ ಎಂಬುವರ ತೋಟ -ಹೊಲಗಳಿಗೆ ಭಾನುವಾರ ರಾತ್ರಿ ಎರಡು ಕಾಡಾನೆಗಳು ದಾಳಿ ಮಾಡಿ ಅಡಿಕೆ ಹಾಗೂ ತೆಂಗಿನ ಮರಗಳನ್ನು ಬುಡಮೇಲು ಮಾಡಿದ್ದು ಜೊತೆಗೆ ಜೋಳ ಹಾಗೂ ಕಬ್ಬು ಬೆಳೆಗಳನ್ನು ನಾಶ ಮಾಡಿವೆ.
ಆನೆಗಳ ಬಗ್ಗೆ ಮಾಹಿತಿ ನೀಡಿದ್ರೂ ಕ್ರಮ ಕೈಗೊಳ್ಳದ ಅರಣ್ಯ ಇಲಾಖೆ ವಿರುದ್ಧ ರೈತರು ಆಕ್ರೋಶ ಹೊರಹಾಕಿದ್ದಾರೆ, ಆನೆ ದಾಳಿಗೆ ಪರಿಹಾರ ನೀಡುವಂತೆ ರೈತರು ಒತ್ತಾಯಿಸಿದ್ದಾರೆ.
ಪುರದಾಳು ಗ್ರಾಮ ಶಿವಮೊಗ್ಗ ಜಿಲ್ಲಾ ಕೇಂದ್ರದಿಂದ ಕೇವಲ 9 ಕಿ.ಮೀ ದೂರದಲ್ಲಿದೆ.