Breaking
Tue. Oct 8th, 2024

ಮಹಾಲಕ್ಷ್ಮಿಯ ಹಂತಕನ ಗುರುತು ಪತ್ತೆ, ಶೀಘ್ರವೇ ಬಂಧಿಸುತ್ತೇವೆ: ನಗರ ಪೊಲೀಸ್ ಆಯುಕ್ತ ಬಿ ದಯಾನಂದ್

By Mooka Nayaka News Sep 23, 2024
Spread the love

ಬೆಂಗಳೂರು: ರಾಜಧಾನಿ ಬೆಂಗಳೂರನ್ನು ಬೆಚ್ಚಿ ಬೀಳಿಸಿರುವ ಮಹಾಲಕ್ಷ್ಮೀ ಹತ್ಯೆ ಪ್ರಕರಣದ ತನಿಖೆ ಚುರುಕುಗೊಂಡಿದ್ದು, ಹಂತಕನು ಹೊರ ರಾಜ್ಯದವನು ಎಂಬ ಮಾಹಿತಿ ಲಭ್ಯವಾಗಿದೆ. ಆತ ಬೆಂಗಳೂರಿನಲ್ಲಿ ವಾಸವಾಗಿದ್ದ ಎಂಬುವುದು ತಿಳಿದುಬಂದಿದ್ದು, ಶಂಕಿತನ ಬಗ್ಗೆ ಈ ಹಂತದಲ್ಲಿ ಹೆಚ್ಚಿನ ಮಾಹಿತಿ ನೀಡಲು ಸಾಧ್ಯವಿಲ್ಲ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಬೆಂಗಳೂರು ವೈಯಾಲಿಕಾವಲ್‌ ನಿವಾಸಿ ಮಹಾಲಕ್ಷ್ಮೀ ಕೊಲೆ ಪ್ರಕರಣದ ಆರೋಪಿಯ ಗುರುತು ಪತ್ತೆಯಾಗಿದೆ. ಆರೋಪಿಗಾಗಿ ಹುಡುಕಾಟ ಮುಂದುವರೆದಿದ್ದು, ಶೀಘ್ರವೆ ಬಂಧಿಸುತ್ತೇವೆ.ಎಲ್ಲ ಕೋನಗಳಿಂದಲೂ ತನಿಖೆ ನಡೆಸಲಾಗುತ್ತಿದೆ. ಪ್ರಮುಖ ಆರೋಪಿಯನ್ನು ಗುರುತಿಸಿ ಆತನನ್ನು ಬಂಧಿಸಲು ಪ್ರಯತ್ನಗಳು ನಡೆಯುತ್ತಿವೆ ಎಂದರು.

 

Related Post