ಬೆಂಗಳೂರು: ಅತಿಥಿ ಉಪನ್ಯಾಸಕರ ಹುದ್ದೆಗೆ ಯಾವುದೇ ಅಭ್ಯರ್ಥಿಗಳನ್ನು ಆಯ್ಕೆ ಮಾಡುವುದಕ್ಕೂ ಮುನ್ನ ವಿಶ್ವವಿದ್ಯಾಲಯ ಧನಸಹಾಯ ಆಯೋಗ (ಯುಜಿಪಿ) ನಿಗದಿಪಡಿಸಿರುವ ಕನಿಷ್ಠ ವಿದ್ಯಾರ್ಹತೆ ನಿಯಮಾವಳಿ ಅನುಸರಿಸುವಂತೆಹೈಕೋರ್ಟ್ ಉನ್ನತ ಶಿಕ್ಷಣ ಇಲಾಖೆ ಮತ್ತು ಕಾಲೇಜು ಶಿಕ್ಷಣ ಇಲಾಖೆಗೆ ಹೈಕೋರ್ಟ್ ನಿರ್ದೇಶನ ನೀಡಿದೆ.
ಎಚ್.ಸಂಜೀವಯ್ಯ ಮತ್ತು ಇತರ ಮೂವರು ಸಲ್ಲಿಸಿದ್ದ ಅರ್ಜಿಯನ್ನು ಭಾಗಶಃ ಪುರಸ್ಕರಿಸಿದ ನ್ಯಾಯಮೂರ್ತಿ ಆರ್.ನಟರಾಜ್ ಈ ನಿರ್ದೇಶನ ನೀಡಿದ್ದಾರೆ.
ಕರ್ನಾಟಕ ರಾಜ್ಯ ಅರ್ಹತಾ ಪರೀಕ್ಷೆ (ಕೆಎಸ್‌ಇಟಿ)/ ರಾಜ್ಯ ಅರ್ಹತಾ ಪರೀಕ್ಷೆ (ಎಸ್‌ಇಟಿ) /ರಾಷ್ಟ್ರೀಯ ಅರ್ಹತಾ ಪರೀಕ್ಷೆ (ಎನ್‌ಇಟಿ) /ಪಿಎಚ್ಡಿ ಪರೀಕ್ಷೆಗಳನ್ನು ಒತ್ತಾಯಿಸದೆ ಸ್ನಾತಕೋತ್ತರ ಪದವೀಧರರನ್ನು ಮಾತ್ರ ಪರಿಗಣಿಸುವ ಆಗಸ್ಟ್ 24, 2024 ರ ಅಧಿಸೂಚನೆಯನ್ನು ಅರ್ಜಿದಾರರು ಪ್ರಶ್ನಿಸಿದ್ದರು.
ಅರ್ಜಿ ಪರಿಶೀಲಿಸಿದ ನ್ಯಾಯಾಲಯ, ಯುಜಿಸಿ ನಿಯಮಾವಳಿಗಳು, 2018 ರಲ್ಲಿ ಸೂಚಿಸಿದಂತೆ ಕನಿಷ್ಠ ವಿದ್ಯಾರ್ಹತೆಗಳನ್ನು ಹೊಂದಿರದ ಯಾವುದೇ ಅಭ್ಯರ್ಥಿಯನ್ನು ಇಲಾಖೆಗಳು ಆಯ್ಕೆ ಮಾಡಬಾರದು ಎಂದು ಸ್ಪಷ್ಟಪಡಿಸಿದೆ.