Breaking
Tue. Oct 8th, 2024

ತನಿಖೆಗೆ ಸಿದ್ಧ ; ವಿಶೇಷ ಕೋರ್ಟ್ ಆದೇಶದ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಮೊದಲ ಪ್ರತಿಕ್ರಿಯೆ!

By Mooka Nayaka News Sep 25, 2024
Spread the love

ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಜನಪ್ರತಿನಿಧಿಗಳ ಕೋರ್ಟ್ ಸಿಎಂ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತ ತನಿಖೆಗೆ ಆದೇಶ ಹೊರಡಿಸಿದ ಬೆನ್ನಲ್ಲೇ ತಾವು ತನಿಖೆಗೆ ಸಿದ್ಧ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಮುಡಾ ಹಗರಣ ಸಂಬಂಧ ಹೈಕೋರ್ಟ್ನಲ್ಲಿ ಸಿದ್ದರಾಮಯ್ಯ ಅರ್ಜಿ ವಜಾಗೊಂಡ ಬೆನ್ನಲ್ಲೇ ಇತ್ತ ಜನಪ್ರತಿನಿಧಿಗಳ ವಿಶೇಷ ಕೋರ್ಟ್ನಲ್ಲೂ ಸಹ ಸಿಎಂಗೆ ಹಿನ್ನೆಡೆಯಾಗಿದೆ.

ಹೈಕೋರ್ಟ್ ಆದೇಶವನ್ನು ಉಲ್ಲೇಖಿಸಿ ಜನಪ್ರತಿನಿಧಿಗಳ ಕೋರ್ಟ್, ಸಿಎಂ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತ ತನಿಖೆಗೆ ಆದೇಶಿಸಿದೆ. ಈ ಬಗ್ಗೆ ಸಿಎಂ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ.

ನಿನ್ನೆ ಹೈಕೋರ್ಟ್ 17ಎ ಅನ್ವಯ ತನಿಖೆ ನಡೆಸುವಂತೆ ಆದೇಶಿಸಿತ್ತು. ಹೈಕೋರ್ಟ್ ಆದೇಶ ಮೇಳೆ ಜನಪ್ರತಿನಿಧಿಗಳ ಕೋರ್ಟ್ ತೀರ್ಪು ನೀಡಿದೆ/ ಕೋರ್ಟ್ ತೀರ್ಪಿನ ಪ್ರತಿ ಸಿಕ್ಕಿದ ಬಳಿಕ ಪ್ರತಿಕ್ರಿಯೆ ನೀಡುತ್ತೇನೆ. ತನಿಖೆ ಎದುರಿಸಲು ನಾವು ತಯಾರಿದ್ದೇವೆ’ ಎಂದು ಹೇಳಿದ್ದಾರೆ.

‘ಕೋರ್ಟ್ ತೀರ್ಪಿನ ಪ್ರತಿ ಸಿಕ್ಕಿದ ಬಳಿಕ ಪ್ರತಿಕ್ರಿಯೆ ನೀಡುತ್ತೇನೆ. ತನಿಖೆ ಎದುರಿಸಲು ನಾವು ತಯಾರಿದ್ದೇವೆ ತನಿಖೆ ಮಾಡಲು ಮೈಸೂರು ಲೋಕಾಯುಕ್ತಗೆ ಕೋರ್ಟ್ ಸೂಚನೆ. ಪೂರ್ಣ ಆದೇಶದ ಪ್ರತಿ ಸಿಕ್ಕಿದ ಬಳಿಕ ಮುಂದಿನ ತೀರ್ಮಾನ ಮಾಡುತ್ತೇವೆ. ನಾವು ಯಾವುದಕ್ಕೂ ಹೆದರಲ್ಲ, ತನಿಖೆಗೆ ನಾವು ತಯಾರಿದ್ದೇವೆ. ಆದ್ರೆ ಈಗ ಕೊಟ್ಟಿರುವ ಆದೇಶವನ್ನು ಇನ್ನೂ ಓದಿಲ್ಲ.

ಕೇರಳದಿಂದ ಬಂದ ಮೇಲೆ ಆದೇಶದಲ್ಲಿ ಏನಿದೆ ನೋಡುತ್ತೇನೆ. ಕೋರ್ಟ್ ಆದೇಶ ಸಿಕ್ಕಿದ ಮೇಲೆ ವಕೀಲರ ಜತೆ ಚರ್ಚಿಸ್ತೇನೆ ಆ ನಂತರ ಸುಪ್ರೀಂಕೋರ್ಟ್ಗೆ ಮೇಲ್ಮನವಿ ಸಲ್ಲಿಸುತ್ತೇವೆ ಎಂದು ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.

Related Post