Breaking
Tue. Oct 8th, 2024

ಬೈಂದೂರು ಕ್ಷೇತ್ರದ ಮಾಜಿ ಶಾಸಕ ಕೆ.ಲಕ್ಷ್ಮೀ ನಾರಾಯಣ ನಿಧನ

By Mooka Nayaka News Sep 27, 2024
Spread the love

ಕುಂದಾಪುರ : ಬೈಂದೂರಿನ ಮಾಜಿ ಶಾಸಕ ಕೆ.ಲಕ್ಷ್ಮೀ ನಾರಾಯಣ (85) ಅವರು ಇಂದು ಬೆಳಗ್ಗೆ ಬೆಂಗಳೂರಿನಲ್ಲಿ ನಿಧನ ಹೊಂದಿದರು.

ಲಕ್ಷ್ಮಿ ನಾರಾಯಣ ಅವರು ಕೆಲ ಸಮಯಗಳಿಂದ ಬೆಂಗಳೂರಿನಲ್ಲೇ ವಾಸವಿದ್ದರು. ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು ಎನ್ನಲಾಗಿದೆ.

ಮೃತರು ಓರ್ವ ಪುತ್ರ ಹಾಗೂ ಪುತ್ರಿಯನ್ನು ಅಗಲಿದ್ದಾರೆ. ಪತ್ನಿ ಕೆಲ ವರ್ಷಗಳ ಹಿಂದೆ ನಿಧನರಾಗಿದ್ದರು.

ಅಂತಿಮ ದರ್ಶನಕ್ಕಾಗಿ ಬೆಂಗಳೂರಿನ ಡಾಲರ್ ಕಾಲೋನಿಯಲ್ಲಿರುವ ಮನೆಯಲ್ಲಿ ವ್ಯವಸ್ಥೆ ಮಾಡಲಾಗಿದೆ. ಸಂಜೆ 4.30ಕ್ಕೆ ಬನಶಂಕರಿಯ ಚಿತಾಗಾರದಲ್ಲಿ ಅಂತ್ಯ ಸಂಸ್ಕಾರ ನೆರವೇರಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.

ಇವರು 2008 ರಲ್ಲಿ ಬೈಂದೂರು ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಶಾಸಕರಾಗಿ ಆಯ್ಕೆಯಾಗಿದ್ದರು. ಅದಕ್ಕೂ ಮೊದಲು ಎರಡು ಬಾರಿ ಬಿಜೆಪಿಯಿಂದ ಸ್ಪರ್ಧಿಸಿ ಸೋತಿದ್ದರು. ಸ್ನಾತಕೋತ್ತರ ಪದವಿಧದರಾಗಿರುವ ಇವರು ಉದ್ಯಮಿಯಾಗಿ ಹೆಸರು ಗಳಿಸಿದ್ದರು.

Related Post