Breaking
Tue. Oct 8th, 2024

ಮನೆಗೆ ಬಾರದ ಪತ್ನಿ ; ಸಿಟ್ಟಾಗಿ ಮಾವ ಬೆಳೆದ ಅಡಿಕೆ ಗಿಡಗಳನ್ನು ನಾಶ ಮಾಡಿದ ಅಳಿಯ!

By Mooka Nayaka News Sep 27, 2024
Spread the love

ಹಾವೇರಿ : ಪತ್ನಿಯನ್ನು ಮನೆಗೆ ಕಳುಹಿಸಲಿಲ್ಲ ಎಂದು ಮಾವನ ಮೇಲೆ ಸಿಟ್ಟಾದ ಅಳಿಯನೊಬ್ಬ, ಅಡಕೆ ತೋಟ ನಾಶಪಡಿಸಿದ್ದಾನೆ. ಮಾವ ಬೆಳೆಸಿದ್ದ 106 ಅಡಿಕೆ ಗಿಡಗಳನ್ನು ಕಡಿದು ಸಿಟ್ಟು ಹೊರಹಾಕಿದ್ದಾನೆ. ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಬಸಾಪುರ ಗ್ರಾಮದಲ್ಲಿ ಘಟನೆ ನಡೆದಿದೆ. ಆಡೂರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ದೇವೆಂದ್ರಪ್ಪ ಫಕ್ಕಿರಪ್ಪ ಗಾಣಿಗೇರಗೆ ಸೇರಿದ ಅಡಿಕೆ ತೋಟವನ್ನು ಅಳಿಯ ಬಸವರಾಜ್ ಎಂಬಾತ ಅಡಿಕೆ ಬೆಳೆ ನಾಶ ಮಾಡಿದ್ದಾನೆ. ಶಿವಮೊಗ್ಗ ಜಿಲ್ಲೆಯ ಸೊರಬ ಮೂಲದ ಬಸವರಾಜ್ ಹತ್ತು ವರ್ಷಗಳ ಹಿಂದೆ ಮದುವೆಯಾಗಿದ್ದ. ಆದರೆ ಪತ್ನಿ ಜತೆಗೆ ನಿತ್ಯವು ಜಗಳವಾಡುತ್ತಿದ್ದ. ಗಂಡನ ಕಿರುಕುಳಕ್ಕೆ ಬೇಸತ್ತ ಪತ್ನಿ ತವರು ಮನೆ ಸೇರಿದ್ದಳು. ಮೂರು ತಿಂಗಳಿನಿಂದ ಪತ್ನಿ ತವರು ಮನೆಯಲ್ಲಿ ಇದ್ದಿದ್ದಕ್ಕೆ ಸಿಟ್ಟಾದ ಬಸವರಾಜ್‌, ಅಡಿಕೆ ತೋಟವನ್ನು ನಾಶ ಮಾಡಿದ್ದಾನೆ. ಪತಿ- ಪತ್ನಿ ನಡುವಿನ ಜಗಳಕ್ಕೆ ಅಡಕೆ ಗಿಡಗಳು ಬಲಿಯಾಗಿವೆ.

Related Post