ಬೆಂಗಳೂರು : ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಳ್ಳಾರಿ ಜೈಲಿನಲ್ಲಿರುವ ನಟ ದರ್ಶನವರು ಇಂದು ಜೈಲಿನಿಂದ ಬಿಡುಗಡೆಯಾಗುತ್ತಾರೆ. ಅವರನ್ನು ಬಳ್ಳಾರಿಯಿಂದ ಬೆಂಗಳೂರಿಗೆ ಹೆಲಿಕ್ಯಾಪ್ಟರ್ ನಲ್ಲಿ ಕರೆತರಲಾಗುತ್ತದೆ ಹಾಗಾಗಿ ಹೆಲಿಕ್ಯಾಪ್ಟರ್ ಬುಕ್ ಮಾಡಲಾಗಿತ್ತು ಎಂದು ಊಹಾಪೋಹಗಳು ಎದ್ದಿದ್ದವು. ಇದೀಗ ಈ ಒಂದು ಪ್ರಕರಣಕ್ಕೆ ಸಂಬಂಧಪಟ್ಟಂತೆ ಬೆಂಗಳೂರಿನ ಸೇಷನ್ಸ್ ನ್ಯಾಯಾಲಯವು ದರ್ಶನ್ ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆಯನ್ನು ಸೆ.30ಕ್ಕೆ ಮುಂದೂಡಿ ಆದೇಶ ಹೊರಡಿಸಿದೆ.
ಬೆಂಗಳೂರಿನ ಸೇಷನ್ಸ್ ಕೋರ್ಟ್ ನಲ್ಲಿ ನಟ ದರ್ಶನ್ ಅವರು ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆ ವೇಳೆ, ಎಸ್ ಪಿ ಪಿ ಪ್ರಸನ್ನಕುಮಾರ ಅವರು ನಟ ದರ್ಶನ್ ಅವರು ಸಲ್ಲಿಸಿದ್ದ ಜಾಮೀನು ಅರ್ಜಿಗೆ ಆಕ್ಷೇಪಣೆ ಸಲ್ಲಿಸಿದ್ದರು. ಈ ವೇಳೆ ವಾದ ಮಂಡನೆಗೆ ಕಾಲಾವಕಾಶ ಕೋರಿ ದರ್ಶನ್ ಪರ ವಕೀಲರಾದ ಸುನಿಲ್ ಮನವಿ ಮಾಡಿದರು. ಹಾಗಾಗಿ ಇವರ ಒಂದು ಮನವಿಯ ಮೇರೆಗೆ ಸೆಪ್ಟೆಂಬರ್ 30 ಕ್ಕೆ ವಿಚಾರಣೆ ಮುಂದೂಡಿ ಕೋರ್ಟ್ ಆದೇಶಿಸಿದೆ.